No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

kalpa News by kalpa News
May 21, 2026
in ಶಿವಮೊಗ್ಗ
1
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ Karnataka Public School project ಜೂನ್ 1ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತಾಗಿ ಸಿಎಂ ಸಿದ್ದರಾಮಯ್ಯ CM Siddaramaiah ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಯಿತು.
ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದೆ. ಎಲ್’ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.

ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಫಲಿತಾಂಶ ಸುಧಾರಣೆ:

ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, Minister Madhu Bangarappa ಈ ಬಾರಿ ಎಸ್’ಎಸ್’ಎಲ್’ಸಿಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ. ಎಸ್’ಎಸ್’ಎಲ್’ಸಿಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2393 ಇದ್ದು ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು ಎಂದರು.
ಈ ಬಾರಿ ಎಸ್’ಎಸ್’ಎಲ್’ಸಿಯಲ್ಲಿ ಎಸ್ ಮತ್ತು ಎಸ್ಟಿ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2ಎ-ಶೇ. 11.5, 2 ಬಿ- ಶೇ.18, 2ಬಿ-ಶೇ.18, 3ಎ- ಶೇ. 8.12, 3ಬಿ- ಶೇ.10 ಫಲಿತಾಂಶ ಸುಧಾರಣೆಯಾಗಿದೆ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಣೆ ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಎಸ್’ಎಸ್’ಎಲ್’ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ. 2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇಕಡ 86.48 . 2025ರಲ್ಲಿ ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು ಶೇಕಡ 13.03 ಹೆಚ್ಚಳವಾಗಿದೆ ಎಂದರು.

Also read: ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣ ಪ್ರಮಾಣ ಗ್ರಾಮೀಣ ಪ್ರದೇಶದಲ್ಲಿ ಶೇಕಡ 94.80 ದಾಖಲಾಗಿದೆ. ನಗರ ಪ್ರದೇಶದಲ್ಲಿ ಶೇಕಡ 93.20 ದಾಖಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಪ್ರಸಕ್ತ ಸಾಲಿನಲ್ಲಿ ಶೇಕಡ 87.62, ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇಕಡ 85.95 ದಾಖಲಾಗಿದೆ ಎಂದರು.

ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಎಸ್’ಎಸ್’ಎಲ್’ಸಿಉತ್ತಮ ಫಲಿತಾಂಶದ ಹಿಂದಿನ ಪ್ರಯತ್ನವನ್ನು ಅವಲೋಕಿಸಿದರೆ ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದೊಂದಿಗೆ ರಾಜ್ಯದಾದ್ಯಂತ ಪೋಷಕರು ಹಾಗೂ ಶಿಕ್ಷಕರ ಸಭೆ ನಡೆಸಲಾಗಿತ್ತು. ಫಲಿತಾಂಶ ಉತ್ತಮಪಡಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಪಠ್ಯ ಆಧಾರಿತ ಅಧ್ಯಯನ ಕ್ರಮ ರೂಪಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಪೂರ್ವ ಭಾವಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಕಾಲ ಕಾಲಕ್ಕೆ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಮೇಲ್ವಿಚಾರಣೆ ಕೈಗೊಳ್ಳಲಾಗಿತ್ತು ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಉತ್ತಮಗೊಳ್ಳಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahKannada NewsKannada News LiveKannada News Online ShivamoggaKannada WebsiteKannadaNewsWebsiteKarnataka Public School projectLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪಸಿಎಂ ಸಿದ್ದರಾಮಯ್ಯ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

Next Post

ಶಿಕಾರಿಪುರ | ಕೆಆರ್’ಸಿಎಸ್’ನಲ್ಲಿ ಶಿಕ್ಷಕರಿಗೆ 3 ದಿನಗಳ ಕಂಪ್ಯೂಟರ್ ಕೌಶಲ್ಯ ಕಾರ್ಯಾಗಾರ ಯಶಸ್ವಿ

kalpa News

kalpa News

Next Post
ಶಿಕಾರಿಪುರ | ಕೆಆರ್’ಸಿಎಸ್’ನಲ್ಲಿ ಶಿಕ್ಷಕರಿಗೆ 3 ದಿನಗಳ ಕಂಪ್ಯೂಟರ್ ಕೌಶಲ್ಯ ಕಾರ್ಯಾಗಾರ ಯಶಸ್ವಿ

ಶಿಕಾರಿಪುರ | ಕೆಆರ್'ಸಿಎಸ್'ನಲ್ಲಿ ಶಿಕ್ಷಕರಿಗೆ 3 ದಿನಗಳ ಕಂಪ್ಯೂಟರ್ ಕೌಶಲ್ಯ ಕಾರ್ಯಾಗಾರ ಯಶಸ್ವಿ

Comments 1

  1. Pingback: ಶಿಕಾರಿಪುರ | ಕೆಆರ್'ಸಿಎಸ್'ನಲ್ಲಿ ಶಿಕ್ಷಕರಿಗೆ 3 ದಿನಗಳ ಕಂಪ್ಯೂಟರ್ ಕೌಶಲ್ಯ ಕಾರ್ಯಾಗಾರ ಯಶಸ್ವಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL