ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜೇಂದ್ರ ನಗರದ 100 ಅಡಿ ರಸ್ತೆಯ ‘ಎಸ್.ಪಿ. ಟವರ್ಸ್’ ನಿರ್ಮಲ ಆಸ್ಪತ್ರೆ ಎದುರು ನೂತನವಾಗಿ ನಿರ್ಮಾಣವಾಗಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಆಶೀರ್ವಾದ ಕಣ್ಣಿನ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಜೂ.15ರ ನಾಳೆ ಬೆಳಗ್ಗೆ 10.30ಕ್ಕೆ ಜರುಗಲಿದೆ ಎಂದು ಆಸ್ಪತ್ರೆಯ ಕಣ್ಣಿನ ತಜ್ಞ ಡಾ.ಅರುಣ್ ತಿಳಿಸಿದರು.
ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಆಶೀರ್ವಾದ ಕಣ್ಣಿನ ಆಸ್ಪತ್ರೆ ಹಲವು ವರ್ಷಗಳಿಂದ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ವಿಶ್ವಾಸಾರ್ಹ ಆರೋಗ್ಯ ನೀಡುತ್ತಾ ಬಂದಿದೆ. ಹಲವು ರೋಗಿಗಳಿಗೆ ಚಿಕಿತ್ಸೆ ನೀಡಿದ್ದು, ನಮ್ಮ ಮೇಲೆ ಶಿವಮೊಗ್ಗ ಜಿಲ್ಲೆಯ ಜನರು ಇಟ್ಟಿರುವ ನಂಬಿಕೆಗೆ ನಾವು ಸದಾ ಕೃತಜ್ಞರು ಎಂದರು.

ಈ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10.30ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದು, ವಿಶೇಷ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದ ಪೂರ‍್ಯಾನಾಯ್ಕ್, ಬಿ.ವೈ. ವಿಜಯೇಂದ್ರ, ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಬಲ್ಕೀಶ್ ಬಾನು, ಧನಂಜಯ ಸರ್ಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಡಿಹೆಚ್‌ಒ ಡಾ.ಕೆ.ಎಸ್. ನಟರಾಜ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಪ್ರಮುಖ ವೈದ್ಯರಾದ ಡಾ. ಕೋಮಲ್, ಡಾ. ಕಿಂಜಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post