ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಕೆ.ಎಸ್. ಈಶ್ವರಪ್ಪ, MLA Eshwarappa ಈಗಷ್ಟೇ ಮದುವೆಯಾಗಿದ್ದು, ಈಗಲೇ 10 ಮಕ್ಕಳಾಗಬೇಕು ಎಂದರೆ ಹೇಗೆ ಎಂದು ಟಾಂಗ್ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಒಕ್ಕಲಿಗರಿಗೆ 2ಡಿ ಹಾಗೂ 2ಸಿ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಕೇವಲ ಘೋಷಣೆ ಮಾತ್ರ ಆಗಿರಲಿದೆ ಎಂದಿರುವ ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದ್ದಾರೆ.
ಈ ಸಮುದಾಯಗಳಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರದಲ್ಲಿ ಬಿಜೆಪಿ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಎಲ್ಲವೂ ಸರಿಯಾಗಿ ದೊರೆಯಲು ಕೊಂಚ ಸಮಯ ಬೇಕು. ಕಾಯುವ ತಾಳ್ಮೆ ಇರಬೇಕು ಎಂದಿದ್ದಾರೆ.
Also read: ಬಾಲ್ಯದಿಂದಲೇ ಮಕ್ಕಳಿಗೆ ಸಾಹಿತ್ಯ ಓದುವ ಹವ್ಯಾಸ ರೂಢಿಸಿ: ಚಿತ್ರಸಾಹಿತಿ ಪ್ರಮೋದ್ ಮರವಂತೆ ಸಲಹೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















