ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #Lok Sabha Election ಸ್ವತಂತ್ರವಾಗಿ ಸ್ಪರ್ಧಿಸಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಇಂದು ಮೂರನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ.
ಒಬ್ಬ ಅಭ್ಯರ್ಥಿ ನಾಲ್ಕು ಬಾರಿ ನಾಮಪತ್ರ ಸಲ್ಲಿಸಲು ಆಯೋಗ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ಮೂರನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಈಶ್ವರಪ್ಪ, ನಾಲ್ಕು ಬಾರಿ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಈಗಾಗಲೇ ಎರಡು ಸಲ್ಲಿಸಿದ್ದು, ಇಂದು ಮೂರನೇ ನಾಮಪತ್ರವನ್ನು ಸಲ್ಲಿಸಿದ್ದೇನೆ ಎಂದರು.
Also read: ಒಂದೇ ದಿನ ಎರಡು ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜಕುಮಾರ್ | ಕಾರಣವೇನು
ಈವರೆಗೂ ನಾನೊಬ್ಬನೇ ಮತದಾರರ ಬಳಿ ಹೋಗಿದ್ದೇನೆ. ಕಾಂಗ್ರೆಸ್’ನವರು ಇನ್ನೂ ಹೋಗಿಲ್ಲ. ನಾನು ಹೋದೆಡೆಯೆಲ್ಲಾ ಅಪಾರ ಬೆಂಬಲ ವ್ಯಕ್ತವಾಗುತ್ತಿದ್ದು, ನನ್ನ ಗೆಲುವು ನಿಶ್ಚಿತ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post