ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯನ್ನು ಏಪ್ರಿಲ್ 11ರಂದು ನಡೆಸಲು ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗತ್ತು. ಆದ್ದರಿಂದ ಸದರಿ ಕೆಸೆಟ್ 2021 ಪರೀಕ್ಷೆಯನ್ನು ಏಪ್ರಿಲ್ 25ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ವಿವಿ ಕೆಸೆಟ್ ಕೇಂದ್ರದ ಮೌಲ್ಯ ಭವನ ಸಂಯೋಜನಾಧಿಕಾರಿ ತಿಳಿಸಿದ್ದಾರೆ.
ಕೆಸೆಟ್ 2021ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರುತ್ತಾ, ಸದರಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post