No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಸದ ಬಿವೈಆರ್ ಆಸಕ್ತಿಯ ಫಲ, ಮತ್ತೊಂದು ಯೋಜನೆ ಶೀಘ್ರ ಜಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2020
in ಶಿವಮೊಗ್ಗ
0
ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರಕ್ಕೆ ಸಮೀಪದ ಕಲ್ಲೂರು ಮಂಡಳಿ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಸಮೀಕ್ಷೆ ನಡೆಸಲಾಯಿತು.

ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತವಾಗಿರುವ ಹೆಮ್ಮೆಯ ಸಂಸದ ಬಿ.ವೈ. ರಾಘವೇಂದ್ರ ಅವರ ನಿರ್ದೇಶನದಂತೆ ಇಂದು(ಬುಧವಾರ) ರಾಜ್ಯ ಪ್ರವಾಸೋದ್ಯಮ ಕಾರ್ಯಪಡೆ ಸದಸ್ಯ ಶ್ರೀ ಲಕ್ಷ್ಮೀ ನಾರಾಯಣ ಕಾಶಿ ಅವರ ನೇತೃತ್ವದಲ್ಲಲಿ ಮೈಸೂರು ಹಾಗೂ ಬೆಂಗಳೂರು ವಿಭಾಗದ ಯೋಜನಾ
ಇಂಜಿನಿಯರ್’ಗಳ ತಂಡ ಕಲ್ಲೂರು ಮಂಡಳಿ ಪ್ರದೇಶವನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು ಸ್ಥಳ ಸಮೀಕ್ಷೆ ನಡೆಸಿತು.

ಇಂಜಿನಿಯರ್’ಗಳಾದ ಮಂಜಪ್ಪ ಮತ್ತು ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕ ಎನ್. ರಾಮಕೃಷ್ಣ, ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಕಾರ್ಯದರ್ಶಿ  ಎನ್. ಗೋಪೀನಾಥ್, ಸಾಹಸ ಅಕಾಡೆಮಿ ಕಾರ್ಯದರ್ಶಿ ಅ.ನಾ. ವಿಜೇಂದ್ರರಾವ್ ಅವರು ತಂಡದಲ್ಲಿದ್ದು ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.

ಅವರೆಲ್ಲರ ಸಲಹೆಯಂತೆ ಕಲ್ಲೂರು ಮಂಡಳಿ ಗುಡ್ಡದ ಮೇಲಿನ ದೇವಸ್ಥಾನದ ಸುತ್ತ ಇರುವ ಕಲ್ಲುಬಂಡೆ, ಜಲತಾಣ, ವೀಕ್ಷಣಾ ಗೋಪುರಗಳನ್ನು ಅಭಿವೃದ್ಧಿಪಡಿಸುವುದು, ಸಾಹಸ ಕ್ರೀಡಾ ತರಬೇತಿ, ಚಾರಣ ಹಾಗೂ ಪ್ರವಾಸಿಗಳ ಅನುಕೂಲಕ್ಕಾಗಿ ಶೌಚಾಲಯ, ಸ್ನಾನಗೃಹ ಸೇರಿದಂತೆ ವಸತಿ ಸಮುಚ್ಚಯಗಳನ್ನು ನಿರ್ಮಿಸಿ ರಸ್ತೆಯನ್ನ ಅಭಿವೃದ್ಧಿಪಡಿಸುವುದು ಮುಂತಾದವುಗಳ ಬಗ್ಗೆ ಮಾಹಿತಿ ನೀಡಲಾಯಿತು.

ಬೆಂಗಳೂರು ವಿಭಾಗದ ಇಂಜಿನಿಯರ್ ಮಂಜಪ್ಪನವರು ಈ ಎಲ್ಲ ಅಂಶಗಳನ್ನೊಳಗೊಂಡಂತೆ ಶೀಘ್ರವಾಗಿ ನೀಲ ನಕ್ಷೆ ತಯಾರಿಸಿ ಮುಂದಿನ ಕ್ರಮಕೈಗೊಳ್ಳುತ್ತೇನೆಂದು ಭರವಸೆ ನೀಡಿದರು. ಭೂ ದಾಖಲೆ, ಸಾಹಸ ಕ್ರೀಡೆಗಳಿಗೆ ಅಗತ್ಯವಾಗಿರುವ ಪರಿಕರಗಳ ಪಟ್ಟಿಯನ್ನು ನೀಡಲು ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರ್ಥಿಕ ಕ್ಲಿಷ್ಟ ಪರಿಸ್ಥಿತಿಯಲ್ಲೂ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜಿಸಿರುವುದು, ಕಾರ್ಯಪಡೆ ರಚಿಸಿ ವರದಿ ಪಡೆದು ರಾಜ್ಯದಾದ್ಯಂತ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಜೊತೆಗೆ ಶಿವಮೊಗ್ಗ ಜಿಲ್ಲೆಯ ಪ್ರವಾಸೀತಾಣಗಳ ಅಭಿವೃದ್ಧಿಗೆ ಒತ್ತು ನೀಡಿರುವುದು ಹೆಮ್ಮೆಯ ವಿಷಯ.

ನಮ್ಮ ನಲ್ಮೆಯ ಸಂಸದ ಬಿ.ವೈ. ರಾಘವೇಂದ್ರ ಅವರು ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಜೋಗ ಅಭಿವೃದ್ಧಿ, ಉಡುತಡಿ, ನಗರಕೋಟೆ, ಕವಲೆದುರ್ಗ ಹಾಗೂ ಕಲ್ಲೂರು ಮಂಡಳಿಗಳನ್ನು ಪ್ರವಾಸಿತಾಣವನ್ನಾಗಿಸಲು ಬೇಕಾದ ಮಂಜೂರಾತಿ ಪಡೆದಿರುವುದು ಸಂಸದರ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ.

ಈ ವೇಳೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಕಾರ್ಯಪಡೆ ಸದಸ್ಯ ಶ್ರೀ ಲಕ್ಷ್ಮೀ ನಾರಾಯಣ ಕಾಶಿ, ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸದ್ಯದ ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲೂ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುವ ನಂಬಿಕೆಯಿದೆ. ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಪ್ರವಾಸಿತಾಣಗಳನ್ನ್ನು ಆಕರ್ಷಣೀಯವನ್ನಾಗಿಸುವ ಬಗ್ಗೆ ವಿಸ್ತೃತ ಆಲೋಚನೆಗಳಿವೆ. ಹಂತಹಂತವಾಗಿ ಅಭಿವೃದ್ಧಿಯನ್ನು ನಿರೀಕ್ಷಿಸಬಹುದು. ಇದಕ್ಕೆ ಪೂರಕವಾಗಿ ನೆಚ್ಚಿನ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಜಿಲ್ಲೆಯ ಹಲವಾರು ತಾಣಗಳನ್ನು ಆಕರ್ಷಣೀವನ್ನಾಗಿಸುವ ಭರವಸೆ ನೀಡಿದ್ದಾರೆ. ಅವರ ಪರಿಶ್ರಮದ ಫಲವಾಗಿ ಕೆಲಕಾಲದಲ್ಲಿಯೇ ಕಲ್ಲೂರು ಮಂಡಳಿ ಪ್ರದೇಶದಲ್ಲಿ ಚಾರಣ, ಶಿಲಾರೋಣ, ಜಲಸಾಹಸ ಕ್ರೀಡಾತಾಣವಾಗುತ್ತಿರುವುದು ನಮಗೆಲ್ಲ ಹೆಮ್ಮೆ ತಂದಿದೆ ಎಂದರು.

ಮುಖ್ಯಮಂತ್ರಿಗಳು ಹಾಗೂ ಸಂಸದರ ಆದ್ಯತೆಯಂತೆ ಜಿಲ್ಲೆಯ ಜೋಗ ಸೇರಿದಂತೆ ಎಲ್ಲಾ ತಾಣಗಳಲ್ಲಿ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ.

(ವರದಿ: ಡಾ.ಸುಧೀಂದ್ರ)

Get in Touch With Us info@kalpa.news Whatsapp: 9481252093

Tags: Adventure SportsCM B S YediyurappaJog FallsKallur MandliKannada News WebsiteKavale DurgaLakshminarayana KashiLatestNewsKannadaMP B Y RaghavendraNagara FortShivamoggaTourismಜೋಗಪ್ರವಾಸಿತಾಣಪ್ರವಾಸೋದ್ಯಮ ಅಭಿವೃದ್ಧಿಲಕ್ಷ್ಮೀ ನಾರಾಯಣ ಕಾಶಿಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share207Tweet123Send
Previous Post

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

Next Post

ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು

ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL