ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜ್ವಾಲಾಮುಖಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿ. ಮೂರ್ತಿಯವರ ನೇತ್ರತ್ವದಲ್ಲಿ ಅಂಬೇಡ್ಕರ್ ವೃತ್ತ (ಜೈಲ್ ಸರ್ಕಲ್ )ದಲ್ಲಿ ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕಿ ರೇಖಾ ರಂಗನಾಥ್ ಕನ್ನಡ ಧ್ವಜಾರೋಹಣ ನೆರವೇರಿಸಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದರು
ನಂತರ ಮಾತನಾಡಿದ ಅವರು ನಗರದ ಜ್ವಾಲಾಮುಖಿ ಡಾ. ರಾಜಕುಮಾರ್ ಅಭಿಮಾನಿಗಳ ಸಂಘವು ಹಲವಾರು ವರ್ಷಗಳಿಂದ ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಹಾಗೂ ರಾಜ್ ಕುಮಾರ್ ಅವರ ನೆನಪಿನಲ್ಲಿ ಸಮಾಜಮುಖಿ ಕೆಲಸವನ್ನು ಮಾಡುತ್ತಿದ್ದು ಸಂಘದ ಅಧ್ಯಕ್ಷರಾದ ರಾಜಕುಮಾರ್ ಅವರ ಅಪ್ಪಟ ಅಭಿಮಾನಿ ವಿ.ಮೂರ್ತಿಯವರು ಹಲವು ಬಾರಿ ರಕ್ತದಾನ ವಿಶೇಷವಾಗಿ ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದು ಈ ರಾಜ್ಯೋತ್ಸವ ಸಂದರ್ಭದಲ್ಲಿ ಅಪ್ಪು ಅವರ ನೆನಪಿಗಾಗಿ ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಿದ್ದಾರೆ ಅವರಿಗೆ ಎಲ್ಲರ ಪರವಾಗಿ ಕೃತಜ್ಞತೆಗಳು ಪುನೀತ್ ರಾಜಕುಮಾರ್ ರವರು ವ್ಯಕ್ತಿಯ ಆಗಿಲ್ಲದೆ ಒಂದು ವ್ಯಕ್ತಿತ್ವವಾಗಿದ್ದಾರೆ ಎಂದು ಅಪ್ಪು ಅವರನ್ನು ಸ್ಮರಿಸಿದರು
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಮಹೇಶ್, ಮೂರ್ತಿ, ಗೋಪಿ ,ಮಾಲ್ತೇಶ್, ಬೊಮ್ಮನಕಟ್ಟೆ , ಮಂಜುನಾಥ್, ಮುಕ್ಕಲ್ ಅಹಮದ್ , ರಾಮು, ದೇವರಾಜ್, ನಾಗೇಶ್ ಹಾಗೂ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post