ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರ ಕರಾಟೆ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.
ನೆಹರೂ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು.
ರಾಜ್ಯೋತ್ಸವದ ಅಂಗವಾಗಿ ಕರಾಟೆ ಕಲಿಕೆಯ ಮಕ್ಕಳಿಗೆ ಚಿತ್ರಕಲೆ, ಸಾಹಿತ್ಯ ಹಾಗೂ ಕನ್ನಡದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆ, ನಾಡು, ನುಡಿಯ ಕುರಿತಾಗಿನ ಜ್ಞಾನವನ್ನು ಹೆಚ್ಚಿಸುವ ವಿಶಿಷ್ಠ ಕಾರ್ಯವನ್ನು ಮಾಡಲಾಯಿತು.
ಸಂಘದ ಅಧ್ಯಕ್ಷ ವಿನೋದ್ ಅಧ್ಯಕ್ಷತೆ ವಹಿಸಿದ್ದರು. ತುಂಗಾತರಂಗ ದಿನಪತ್ರಿಕೆ ಸಂಪಾದಕ ಎಸ್.ಕೆ. ಗಜೇಂದ್ರಸ್ವಾಮಿ, ಎಚ್ಚರಿಕೆ ಪತ್ರಿಕೆಯ ಸಂಪಾದಕ ಸೂರ್ಯನಾರಾಯಣ್, ಸಹ್ಯಾದ್ರಿ ಸ್ನೇಹ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್ ಕಿರಣ್, ಮಾನವ ಹಕ್ಕುಗಳ ಕಮಿಟಿ ಹೀರಾ, ಸಿಟಿ ಕರಾಟೆ ಅಸೋಸಿಯೇಷನ್‌ನ ಗೌರವಾಧ್ಯಕ್ಷರಾದ ರಾಘವೇಂದ್ರ, ವೀರೇಶ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post