ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರ್ಗಿಲ್ ವಿಜಯೋತ್ಸವಕ್ಕೆ #Kargil victory ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ #Radio Shivamogga ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಯೇ ದಿಲ್ ಮಾಂಗೇ ಮೋರ್ ರೂಪಿಸಿದೆ.
ಜುಲೈ 21ರ ಭಾನುವಾರ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ 12 ತಾಸುಗಳ ನೇರಪ್ರಸಾರದ ಕಾರ್ಯಕ್ರಮ ಇದಾಗಿರುತ್ತದೆ. ಯೇ ದಿಲ್ ಮಾಂಗೇ ಮೋರ್ ಶೀರ್ಷಿಕೆಯ ಈ ನೇರಪ್ರಸಾರವನ್ನು ಚೇತನ್ ಸಿ ರಾಯನಹಳ್ಳಿ ಹಾಗೂ ಕೆ.ವಿ. ಅಜೇಯ ಸಿಂಹ ನಡೆಸಿಕೊಡಲಿದ್ದಾರೆ.
Also read: ಹೆಬ್ಬಾಳೆ ಸೇತುವೆ ಮೇಲೆ ನೀರು | ಕಳಸ-ಹೊರನಾಡು ಸಂಪರ್ಕ ಕಡಿತ | ಬದಲಿ ಮಾರ್ಗ ಹೀಗಿದೆ
ಇದರಲ್ಲಿ ಭಾರತೀಯ ಸೇನೆ, ಕಾರ್ಗಿಲ್ ಯುದ್ಧ, ಯುದ್ಧ ನೀತಿಗಳು, ವೀರಯೋಧರ ಕುರಿತಾಗಿ ಮಾತುಗಳು, ವೀರ ಯೋಧರೊಂದಿಗೆ ಸಂವಾದ ಹಾಗೂ ದೇಶಭಕ್ತಿ ಗೀತೆಗಳು, ಚಲನಚಿತ್ರದ ಹಾಡುಗಳು ಇರುತ್ತವೆ. ಈ ಕಾರ್ಯಕ್ರಮಕ್ಕೆ ತಾವೂ ಕರೆ ಮಾಡಿ ಮಾತನಾಡಬಹುದು. ತಾವು (ಮೊ: 96 860 96 279)ಗೆ ಕರೆ ಮಾಡಬಹುದು.
ರೇಡಿಯೋ ಶಿವಮೊಗ್ಗ ಆಪ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ಗಳಲ್ಲಿ ಲಭ್ಯವಿದ್ದು, ಇದನ್ನು ಡೌನ್ ಲೋಡ್ ಮಾಡಿಕೊಂಡು ದಿನದ 24 ಗಂಟೆಯೂ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ಆಲಿಸಬಹುದೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post