No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

ಕಾರ್ಗಿಲ್‌ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹುತಾತ್ಮ ಸೈನಿಕರ ಸ್ಮಾರರಕ್ಕೆ ಪುಷ್ಪಗೌರವ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 26, 2025
in ಶಿವಮೊಗ್ಗ
0
ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ 26 ಕಾರ್ಗಿಲ್‌ ವಿಜಯೋತ್ಸವದ #Kargil Victory Day ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegde ಅವರು ಹೇಳಿದರು.

ಅವರು ಇಂದು ನಗರದ ಸೈನಿಕ ಪಾರ್ಕ್‌ನಲ್ಲಿ ಸೈನಿಕ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ, ನೆಹರೂ ಸ್ಟೇಡಿಯಂ ಗೆಳೆಯರ ಬಳಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಗಿಲ್‌ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹುತಾತ್ಮ ಸೈನಿಕರ ಸ್ಮಾರರಕ್ಕೆ ಪುಷ್ಪಗೌರವ ಸಲ್ಲಿಸಿ, ಮಾತನಾಡುತ್ತಿದ್ದರು.
ಈ ವಿಜಯೋತ್ಸವದ ಸಂಭ್ರಮವನ್ನು ಪ್ರತಿ ವರ್ಷ ಸಡಗರ ಸಂಭ್ರಮಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದೇಶಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ. ದೇಶದ ರಕ್ಷಣೆಯ ವಿಷಯದಲ್ಲಿ ನಮ್ಮ ದೇಶದ ಪ್ರತಿ ಸೈನಿಕರೂ ಕಠಿಬದ್ದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ದೇಶದ ಪ್ರತಿ ವ್ಯಕ್ತಿಯ ನೆಮ್ಮದಿಯ ಬದುಕಿನ ಹಿಂದೆ ಸೈನಿಕರ ಸಹಕಾರವಿರುವುದನ್ನು ನಾವು ಸದಾ ನೆನಪಿಸಿಕೊಳ್ಳಬೇಕು ಎಂದ ಅವರು, ಕಾರ್ಗಿಲ್‌ ಯುದ್ಧದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ನಮ್ಮ ವೀರಯೋಧರು ಪ್ರಾಣಾರ್ಪಣೆ ಮಾಡಿರುವುದು ನೋವನ್ನುಂಟು ಮಾಡುತ್ತದೆ. ಈ ಸಂದರ್ಭದಲ್ಲಿ ದೇಶದ ಪ್ರತಿ ನಾಗರೀಕರೂ ಹುತಾತ್ಮರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವ ಪ್ರಮಾಣ ಕೈಗೊಳ್ಳಬೇಕೆಂದವರು ನುಡಿದರು.

ದೇಶದ ಭದ್ರತೆಯ ಪ್ರಶ್ನೆ ಎದುರಾಗುವ ಎಲ್ಲಾ ಹಂತದಲ್ಲಿಯೂ ನಾವು ಸೈನಿಕರೊಂದಿಗೆ ಸೈನಿಕರಾಗಿ, ವೀರಸೇನಾನಿಗಳಂತೆ ನಿಲ್ಲಬೇಕು. ಈ ಕಾರ್ಯಕ್ರಮವು ಸೈನಿಕರು, ಮಾಜಿಸೈನಿಕರು, ಅವರ ಕುಟುಂಬಕ್ಕೆ ಆಸರೆಯಾಗಿ ನಿಲ್ಲುವ, ದೇಶದ ಪ್ರತಿ ನಾಗರೀಕರಿಗೂ ದೇಶಪ್ರೇಮ ಜಾಗೃತಿಗೊಳಿಸುವಂತೆ ಮಾಡುವ ಉದ್ದೇಶ ಇದಾಗಿದೆ ಎಂದವರು ನುಡಿದರು.

ಈ ಕಾರ್ಯಕ್ರಮವು ಸಶಸ್ತ್ರ ಪಡೆಗಳ ನಿರಂತರ ಧೈರ್ಯ ಮತ್ತು ಸಮರ್ಪಣೆ, ರಾಷ್ಟ್ರೀಯ ಒಗ್ಗಟ್ಟು, ಸೇವೆ ಮತ್ತು ಶಾಂತಿಯ ಮೌಲ್ಯಗಳು ಮತ್ತು ಭಾರತವನ್ನು ಸುರಕ್ಷಿತವಾಗಿಡುವ ನಿಜ ಜೀವನದ ವೀರರನ್ನು ನೆನಪಿಸಿಕೊಳ್ಳುವ ಮಹತ್ವದ ದಿನವಾಗಿದೆ. ಯುವ ಮನಸ್ಸುಗಳಲ್ಲಿ ದೇಶಭಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಕೃತಜ್ಞತೆಯ ಭಾವನೆಯನ್ನು ತುಂಬಲು ಶಾಲೆಗಳು ಈ ದಿನವನ್ನು ಆಚರಿಸುತ್ತವೆ. ಇದು ವಿದ್ಯಾರ್ಥಿಗಳು ತಮ್ಮ ದೇಶವನ್ನು ಮೆಚ್ಚುವಂತೆ ಮತ್ತು ಏಕತೆ ಮತ್ತು ಸಾಮರಸ್ಯದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಪ್ರೇರೇಪಿಸುತ್ತದೆ.

ಈ ಸಂದರ್ಭದಲ್ಲಿ ಉಪಸ್ಥಿತದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈ ದೇಶದ ರಕ್ಷಣೆಗಾಗಿ ತ್ಯಾಗ, ಬಲಿದಾನ ಮಾಡಿದ ವೀರಯೋಧರ ಸವಿನೆನಪಿಗಾಗಿ ಆಚರಿಸಲಾಗುತ್ತಿರುವ 26ನೇ ಕಾರ್ಗಿಲ್‌ ವಿಜಯೋತ್ಸವ ಹುತಾತ್ಮ ಯೋಧರ, ವೀರನಾರಿಯರ ಕುಟುಂಬಕ್ಕೆ ಬೆಂಬಲವಾಗಿರಲಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಇನ್ನಷ್ಟು ರಚನಾತ್ಮಕವಾಗಿ ರೂಪಿಸಿ ಆಚರಿಸಲಾಗುವುದು ಎಂದರು.
ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದಾದ್ಯಂತ ಆಚರಿಸಲಾಗುತ್ತದೆ, ಭಾರತೀಯ ಸಶಸ್ತ್ರ ಪಡೆಗಳ ಕೊಡುಗೆಗಳನ್ನು ಸ್ಮರಿಸಲು ದೇಶಾದ್ಯಂತ ಕಾರ್ಯಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮ ಎಲ್ಲರಲ್ಲೂ ದೇಶಾಭಿಮಾನ ಮೂಡಿಸಲಿದೆ ಮಾತ್ರವಲ್ಲ ಸುರಕ್ಷತೆಗೆ ಪ್ರೇರೇಪಿಸಲಿದೆ. ಜಮ್ಮು-ಕಾಶ್ಮೀರದ ಕಾರ್ಗಿಲ್‌ನ್ನು ಮರಳಿ ವಶಕ್ಕೆ ಪಡೆದ ಭಾರತೀಯ ಸೈನಿಕರ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುವುದರ ದ್ಯೋತಕವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ಡಾ. ಹಿರೇಮಠ್‌ ಸೇರಿದಂತೆ ಅಸಂಖ್ಯಾತ ಮಾಜಿ ಯೋಧರು, ಹುತಾತ್ಮ ಯೋಧರ ಕುಟುಂಬದ ಸದಸ್ಯರು, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಗಿಲ್‌ ವಿಜಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಬೈಕ್‌ರ್ಯಾಲಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಿಂದ ಹೊರಟ ಈ ರ್ಯಾಲಿಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಸೈನಿಕ ಪಾರ್ಕನಲ್ಲಿ ಸಂಪನ್ನಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: DC Gurudatta HegdeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKargil Victory DayLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕಾರ್ಗಿಲ್ ವಿಜಯೋತ್ಸವಜಿಲ್ಲಾಧಿಕಾರಿ ಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪತ್ರಿಕೆಗಳು ಸಮಾಜಕ್ಕೆ ದಿಕ್ಸೂಚಿ: ಸಂಸದ ರಾಘವೇಂದ್ರ

Next Post

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL