ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮನೋವೈದ್ಯೆ ಮತ್ತು ಕಲಾವಿದೆ ಡಾ. ಕೆ.ಎಸ್. ಪವಿತ್ರಾ ಅವರ ಆತಂಕ ಮತ್ತು ಭಯಕ್ಕೆ ಸಂಬಂಧಿಸಿದ ಮಾನಸಿಕ ಕಾಯಿಲೆಗಳು ಎಂಬ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2019ರ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ ಲಭಿಸಿದೆ.
ವಿಜ್ಞಾನ ಪ್ರಕಾರದಲ್ಲಿ ಈ ಪುಸ್ತಕ ಆಯ್ಕೆಯಾಗಿದ್ದು, 2002 ನಂತರ ಅಂದರೆ 17 ವರ್ಷಗಳ ಅಂತರದ ಮೇಲೆ ವಿಜ್ಞಾನ ವಿಭಾಗದಲ್ಲಿ ವೈದ್ಯಕೀಯ ಸಾಹಿತ್ಯಕ್ಕೆ ದೊರೆತಿರುವ ಪ್ರಶಸ್ತಿ ಇದಾಗಿದೆ. ಸೆಪ್ಟೆಂಬರ್ 12 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಾ. ಕೆ.ಎಸ್. ಪವಿತ್ರ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಪ್ರಶಸ್ತಿಯ ಮೊತ್ತವಾಗಿ 25,000ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post