ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಾರಾಣಸಿಯಲ್ಲಿ ನಡೆದ ಕಾಶಿ ಶ್ರೀ ವಿಶ್ವನಾಥ ಧಾಮ ಲೋಕಾರ್ಪಣೆಯ ದಿವ್ಯ ಕಾಶಿ-ಭವ್ಯ ಕಾಶಿಯ ನೇರ ಪ್ರಸಾರದ ಕಾರ್ಯಕ್ರಮವು ಶ್ರೀ ಹರಕೇಶ್ವರ ದೇವಸ್ಥಾನದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಇಂದು ಬೆಳಗ್ಗೆ ಶಿವಮೊಗ್ಗ ನಗರ ಬಿಜೆಪಿ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕೋಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರದಾನ ಅರ್ಚಕರಾದ ಅನಂತರಾಮ್, ಅಯ್ಯಂಗಾರ್ ಕಾಶಿ ಶ್ರೀ ವಿಶ್ವನಾಥ ಧಾಮದ ವಿಚಾರವನ್ನು ತಿಳಿಸಿದರು. ಅರಕೇಶ್ವರ ದೇವಸ್ಥಾನದ ಅರ್ಚಕ ಚಂದ್ರಶೇಖರ ಭಟ್ ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಕಾರ್ಯಕ್ರಮ ಕುರಿತು ಮಾತಾಡಿದರು. ಈ ಸಂದರ್ಭದಲ್ಲಿ ಸಹ ಸಂಘಟನಾ ಪ್ರದಾನ ಕಾರ್ಯದರ್ಶಿ ಎ.ಈ. ನಟರಾಜ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರಾದ ಎಸ್.ದತ್ತಾತ್ರಿ, ವಿಧಾನಪರಿಷತ್ ಅಭ್ಯರ್ಥಿ ಡಿ.ಎಸ್. ಅರುಣ್, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಶಿವರಾಜ್, ಧರ್ಮಪ್ರಸಾದ್, ಮಹಾ ನಗರ ಪಾಲಿಕೆ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ, ಜ್ಞಾನೇಶ್ವರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಈ.ಕಾಂತೇಶ್, ನಗರ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post