ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಮಟ್ಟದ ‘ಮತದಾರ ಸಾಕ್ಷರತಾ ಸಂಘ’ ಮತ್ತು ‘ಚುನಾವಣಾ ಜಾಗೃತಿ ಕ್ಲಬ್’ ನ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಂಗ ಸಂಸ್ಥೆಯಾದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಇಎಲ್‍ಸಿ & ಸಿಜೆಸಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಭಾರತ ಚುನಾವಣಾ ಆಯೋಗದ ಆದೇಶ ಮತ್ತು ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಚುನಾವಣಾ ಆಡಳಿತ ಮತ್ತು ಸ್ವೀಪ್ ಅಡಿಯಲ್ಲಿ ಭಾರತವನ್ನು ಸದೃಢ, ಬಲಿಷ್ಟ ಮೌಲ್ಯಭರಿತ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿಸಲು ಶಾಲಾ ಕಾಲೇಜು ಹಂತದಲ್ಲಿ ಚುನಾವಣೆ ಮತ್ತು ಮತದಾನದ ವಿಷಯಕ್ಕೆ ಸಂಬಂಧಿಸಿದಂತೆ ಜಾಗೃತಿ ಉಂಟು ಮಾಡಿ ಎಲ್ಲರೂ ಮತದಾರರಾಗಬೇಕು, ಯಾರೂ ಮತದಾನದಿಂದ ಹೊರಗೆ ಉಳಿಯಬಾರದು ಎನ್ನು ಉದ್ದೇಶವನ್ನು ಹೊತ್ತು ಅಸ್ತಿತ್ವಕ್ಕೆ ಬಂದ ಮತದಾರ ಸಾಕ್ಷರತಾ ಸಂಘ ಮತ್ತು ಚುನಾವಣಾ ಜಾಗೃತಿ ಕ್ಲಬ್‍ನ ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಶಿವಮೊಗ್ಗ ಜಿಲ್ಲಾ ಮಟ್ಟದ ಮತದಾರ ಸಾಕ್ಷರತಾ ಸಂಘ ಮತ್ತು ಚುನಾವಣಾ ಜಾಗೃತಿ ಕ್ಲಬ್‍ನ ವಿವಿಧ ಸ್ಪರ್ಧೆಗಳನ್ನು ಇತ್ತೀಚೆ ಏರ್ಪಡಿಸಲಾಗಿತ್ತು.
ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ಚಂದನಾ ಹೊಸೂರು ಕನ್ನಡ ಪ್ರಬಂಧ ಸ್ಪರ್ಧೆ, ಅರ್ಫಾ ರಿಮ್ ತಾಜ್ ಇಂಗ್ಲಿಷ್ ಪ್ರಬಂಧ ಸ್ಪರ್ಧೆ, ರಚನಾ ಎಂ.ಆರ್. ಮತ್ತು ರಕ್ಷಿತಾ ಕ್ವಿಜ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಇವರುಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿವಮೊಗ್ಗ ಇದರ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ್, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ರಂಗಪ್ಪ, ಜಿಲ್ಲಾ ಇಎಲ್‍ಸಿ & ಸಿಜೆಸಿ ಯ ಪಿಯು ನೋಡಲ್ ಅಧಿಕಾರಿ ಎಸ್.ಹೆಚ್.ರವಿಕುಮಾರ್ ಮತ್ತು ಕಾಲೇಜಿನ ಉಪನ್ಯಾಸಕ ವರ್ಗ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
Also read: ನೂತನ ಕಾರ್ಮಿಕ ಕಲ್ಯಾಣ ಕೇಂದ್ರ ನಿರ್ಮಾಣ ಕಾಮಗಾರಿಗೆ ಸಚಿವ ಶ್ರೀರಾಮುಲು ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post