ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಜೂ.27ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಾಡ ಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕೆಂಪೇಗೌಡ ಜನ್ಮದಿನಾಚರಣೆ ಸ್ವಾಗತ ಸಮಿತಿ ಅಧ್ಯಕ್ಷ ಡಿ. ಮಂಜುನಾಥ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಶ್ರೀ ಸಾಯಿನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಜಿಲ್ಲಾ ಒಕ್ಕಲಿಗರ ಸಮುದಾಯದ ಎಲ್ಲಾ ಸಂಘಟನೆಗಳ ಸಹಯೋಗದಲ್ಲಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಗಳ ಪ್ರಮುಖರಾದ ಬಿ.ಎ. ರಮೇಶ್‍ಹೆಗ್ಡೆ, ಗೋ. ರಮೇಶ್‍ಗೌಡ, ಡಾ. ಶಾಂತಾಸುರೇಂದ್ರ, ರಘುರಾಜ್, ಪ್ರತಿಭಾ ಡಾಕಪ್ಪ, ಭಾರತ ರಾಮಕೃಷ್ಣ, ಶಶಿಕಲಾ ಪ್ರಶಾಂತ್, ರಘುಗೌಡ, ರಮೇಶ್ ಹೆಗಡೆ, ಶಂಕರ್, ರಾಜೇಶ್, ಸುದರ್ಶನ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post