No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರಗ ಜ್ಞಾನೇಂದ್ರ ಮಣಿಸಲು ಟೊಂಕ ಕಟ್ಟಿ ನಿಂತ ಕಿಮ್ಮನೆ ರತ್ನಾಕರ್, ಆರ್.ಎಮ್‌. ಮಂಜುನಾಥ ಗೌಡ

ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿ ವಿವರ ಹೀಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 12, 2023
in ಶಿವಮೊಗ್ಗ
0
ಆರಗ ಜ್ಞಾನೇಂದ್ರ ಮಣಿಸಲು ಟೊಂಕ ಕಟ್ಟಿ ನಿಂತ ಕಿಮ್ಮನೆ ರತ್ನಾಕರ್, ಆರ್.ಎಮ್‌. ಮಂಜುನಾಥ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಇಬ್ಬರೂ ಒಟ್ಟಾಗಿದ್ದೇವೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇದ್ದದ್ದು ನಿಜ ಆದರೆ ಈಗ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ. ಮತ್ತು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಾವಿಬ್ಬರೂ ಒಟ್ಟಾಗುವ ಜನರ ಬಯಕೆಯನ್ನು ಗೌರವಿಸಿದ್ದೇವೆ. ಇಬ್ಬರೂ ಒಟ್ಟಾಗಬೇಕೆಂಬುದೇ ಕ್ಷೇತ್ರದ ಮತದಾರನ ಅಪೇಕ್ಷೆ. ಹಾಗಾಗಿ ನಾವಿಬ್ಬರೂ ಒಂದಾಗಿ ಬಿಜೆಪಿಯ ಅಭ್ಯರ್ಥಿಯನ್ನು ಅತ್ಯಂತ ಹೆಚ್ಚಿನ ಅಂತರದ ಮತಗಳಿಂದ ಸೋಲಿಸುತ್ತೇವೆ ಎಂದರು.
ಕಿಮ್ಮನೆ ರತ್ನಾಕರ್ ಮಾತನಾಡಿ, ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ. ನಂದಿತಾ ಪ್ರಕರಣದಲ್ಲಿ ಸೋಲು ಕಂಡ ಅವರು ಪುನಃ ಅಂತಹುದೇ ಕೋಮುಗಲಭೆಯನ್ನು ಸೃಷ್ಟಿಸಲು ಹೊರಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ ಎಂದರು.

ಆರಗ ಒಬ್ಬ ಅಸಮರ್ಥ ಗೃಹಮಂತ್ರಿಯಾಗಿದ್ದಾರೆ. ಯಾವ ಅಭಿವೃದ್ಧಿ ಕೆಲಸವನ್ನೂ ತೀರ್ಥಹಳ್ಳಿಯಲ್ಲಿ ಮಾಡಿಲ್ಲ. ಇತ್ತೀಚೆಗೆ ಅವರ ಅನುದಾನದಲ್ಲಿ ಆದ ಡಾಂಬರ್ ರಸ್ತೆಗಳು ಹಪ್ಪಳದಂತೆ ಎದ್ದು ಬರುತ್ತವೆ. ಅವರ ದರ್ಪ ಭ್ರಷ್ಟಾಚಾರ ಇವೆಲ್ಲವೂ ಕೊನೆಗೊಳ್ಳಬೇಕಾಗಿದೆ. ನನ್ನ ಜೊತೆಗೆ ಆರ್‌ಎಂ. ಮಂಜುನಾಥ ಗೌಡರು ಇದ್ದಾರೆ. ಅವರಿಗೆ ಚುನಾವಣೆಯ ಎಲ್ಲಾ ಮೇಲ್ವಿಚಾರಣೆಯನ್ನು ನೀಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿಯೊಂದು ರಚನೆಯಾಗಿದೆ. ಒಟ್ಟಾರೆ ಬಿಜೆಪಿ ಆಡಳಿತಕ್ಕೆ ಕೊನೆ ಹಾಡುತ್ತೇವೆ. ಜೊತೆಗೆ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದರು.
ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರ ಮಗನ ಬಗ್ಗೆ ಕೆಲವು ದೂರುಗಳಿವೆ. ಆತ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾನೆ. ಆತ ನಿರ್ಮಿಸಿದ ಬಡಾವಣೆಗೆ ರಸ್ತೆ ಕೂಡ ಮಾಡಿದ್ದಾರೆ. ಸ್ಯಾಂಟ್ರೋ ರವಿ ಮತ್ತು ಜ್ಞಾನೇಂದ್ರ ಅವರ ಮಗನ ಫೋಟೋಗಳು ಕಾಣಿಸಿಕೊಳ್ಳುತ್ತಿವೆ. ಯಾರ ಸಂಬಂಧ ಯಾರ ಜೊತೆ ಇದೆ ಎಂಬುದು ಈಗಾಗಲೇ ಬಹಿರಂಗವಾಗಿದೆ ಎಂದರು.

ಗೃಹ ಸಚಿವರೇ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ ಆ ಘಟನೆ ಯಾವುದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಬೇಕಾದರೆ ಪ್ರತ್ಯೇಕವಾಗಿ ನಿಮಗೆ ನೀಡುತ್ತೇನೆ. ನೀವು ಪತ್ತೆಹಚ್ಚಿ ಆ ಸತ್ಯವನ್ನು ಹೊರತನ್ನಿ ಎಂದರು.
Kalahamsa Infotech private limitedಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಣ ಸಂಗ್ರಹಣೆ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಸುಮಾರು 5 ಸಾವಿರ ಮಹಿಳೆಯರಿಗೆ ಬೆಳ್ಳಿ ನಾಣ್ಯ ಕೊಟ್ಟ ಸುದ್ದಿ ಇತ್ತು. ಈಗ ಚಿನ್ನದ ನಾಣ್ಯವನ್ನೇ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ ಅವರು, ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಜನರ ಭಾವನೆಗಳಿಗೆ ಬೆಲೆ ಕೊಟ್ಟಿದ್ದೇವೆ. ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡಿದ್ದೇವೆ. ಒಟ್ಟಾಗಿ ಜನರ ಬಳಿ ಹೋಗುತ್ತೇವೆ. ಬಿಜೆಪಿ ಸರ್ಕಾರ ಎಂದೂ ಸತ್ಯವನ್ನು ಹೇಳಲಿಲ್ಲ. ಭ್ರಷ್ಟ ದುಷ್ಟ ಸರ್ಕಾರವಿದು. ರೈತವಿರೋಧಿ, ಉದ್ಯೋಗ ಕಿತ್ತುಕೊಂಡ ಸರ್ಕಾರ. ಇದರ ಜೊತೆಗೆ ಬೆಲೆ ಏರಿಕೆ ಬೇರೆ. ಇದರಿಂದಾಗಿ ಜನರು ಬಿಜೆಪಿ ವಿರುದ್ಧ ರೋಸಿ ಹೋಗಿದ್ದಾರೆ ಎಂದರು.

ಕಿಮ್ಮನೆಯವರನ್ನು ಗೆಲ್ಲಿಸಿಕೊಂಡೇ ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತೇನೆ. ಬಿಜೆಪಿ ಆರಗ ಜ್ಞಾನೇಂದ್ರ ಅವರಿಗೆ ಟಿಕೆಟ್ ಕೊಟ್ಟಿದ್ದು ಸ್ವಾಗತದ ವಿಷಯ. ಅವರನ್ನು ಸೋಲಿಸಿಯೇ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಬೇಕೆಂಬ ನಮ್ಮ ಹಂಬಲ ಹತ್ತಿರವಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್, ಸಿ.ಎಸ್. ಚಂದ್ರಭೂಪಾಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಗದೀಶ್ ಶೆಟ್ಟರ್ ಜೊತೆ ನಡ್ಡಾ ಮಾತುಕತೆ: ಸಭೆ ನಂತರ ಟಿಕೇಟ್ ವಂಚಿತ ಮಾಜಿ ಸಿಎಂ ಹೇಳಿದ್ದೇನು?

Next Post

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL