No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2023
in ಶಿವಮೊಗ್ಗ
0
ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮನುಷ್ಯ ಹುಟ್ಟಿದ ಮೇಲೆ ಸಾವು ಸಾಮಾನ್ಯ. ಆದರೆ ಈ ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಕಣ್ಣು ಸೇರಿದಂತೆ ಅಂಗ ಹಾಗೂ ಅಂಗಾಂಗ ದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು ಎಂದು ಡಾ. ಧನಂಜಯ ಸರ್ಜಿ ಹೇಳಿದರು.

ಸ್ವಚ್ಛ ಸುಂದರ ಸ್ವಸ್ಥ್ಯ ಶಿಕಾರಿಪುರಕ್ಕಾಗಿ, ಪರಸ್ಪರ ಸಹಕಾರಕ್ಕಾಗಿ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪರೋಪಕಾರಂ ತಂಡದ ವತಿಯಿಂದ ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ 200ನೇ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ನೇತ್ರದಾನ ನೋಂದಣಿ ಅಭಿಯಾನ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಎಲೆ ಮರೆಯ ಕಾಯಿಯಂತೆ ದುಡಿಯುತ್ತಿರುವವರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹುಟ್ಟಿನಿಂದಲೋ, ಅಪಘಾತದಿಂದಲೋ ಆಕಸ್ಮಿಕವಾಗಿ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅವರ ಬದುಕಿಗೆ ಬೆಳಕು ನೀಡುತ್ತದೆ. ಮನುಷ್ಯನ ಕಣ್ಣು, ಕಿಡ್ನಿ, ಯಕೃತ್ತು, ಮೇದೋಜ್ಜೀರಕ ಗ್ರಂಥಿ, ಹೃದಯ, ಶ್ವಾಸಕೋಶ, ಕರುಳು, ಚರ್ಮ ಸೇರಿದಂತೆ 8 ಅಂಗಗಳನ್ನು ಹಾಗೂ 75 ಅಂಗಾಂಶಗಳನ್ನು ದಾನ ಮಾಡಬಹುದಾಗಿದೆ. ಅಂಗ ಮತ್ತು ಅಂಗಾಂಗದ ದಾನದಿಂದ ರೋಗಿಯ ಜೀವ ಹಾಗೂ ಜೀವನ ರಕ್ಷಿಸಬಹುದಾಗಿದೆ ಎಂದರು.

ಮರಣಾನಂತರ ಅಂಗ ದಾನದಿಂದ ಮುಂದಿನ ಜನ್ಮದಲ್ಲಿ ಅಂಗವಿಕಲತೆ ಉಂಟಾಗುತ್ತದೆ, ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ ಎಂಬ ಭಾವನೆ ಇದೆ. ಅಲ್ಲದೆ ಜನಮಾನಸದಲ್ಲಿ ವಿವಿಧ ಮೂಢನಂಬಿಕೆಗಳೂ ಬಲವಾಗಿ ಬೇರೂರಿವೆ. ಇದರಿಂದಾಗಿ ಬಹುತೇಕರು ಅಂಗ ದಾನಕ್ಕೆ ಹಿಂದೇಟು ಹಾಕುತ್ತಾರೆ. ಆದ್ದರಿಂದ ಅಂಗಾಂಗ ದಾನಕ್ಕೆ ವಯಸ್ಸು, ಲಿಂಗ, ಜನಾಂಗ ಅಥವಾ ಧರ್ಮದ ಅಪ್ರಸ್ತುತತೆ ಬಗ್ಗೆ ಜನರ ಭಾವನೆಯನ್ನು ಬದಲಾಯಿಸಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ಶಿವಮೊಗ್ಗ ಪರೋಪಕಾರಂನ ಶ್ರೀಧರ್ ಎನ್.ಎಂ. ಮಾತನಾಡಿ ಪಾಪ-ಪುಣ್ಯ ಎರಡೂ ನಮ್ಮ ಅಂತರಂಗದಲ್ಲಿವೆ. ಪ್ರತಿಯೊಬ್ಬರೂ ಪುಣ್ಯ ಕಾರ್ಯದ ಫಲ ಬಯಸುತ್ತಾರೆ. ಆದರೆ ಪಾಪಗಳನ್ನು ಮಾಡುತ್ತಲೇ ಇರುತ್ತಾರೆ. ಸುಖ ಪುಣ್ಯದ ಹಾಗೂ ಪಾಪ ದುಖಃದ ಫಲವಾಗಿದೆ. ಸಾತ್ವಿಕ ಗುಣಗಳಿಂದ ಮನಸ್ಸು ಪರಿಶುದ್ಧವಾಗಿರುತ್ತದೆ ಮತ್ತು ನಿಯಂತ್ರಣದಲ್ಲಿರುತ್ತದೆ. ಸತ್ಸಂಗದ ಮೂಲಕ ಶುದ್ಧ ಮನಸ್ಸು ಹಾಗೂ ಅತ್ಮ ಸಾಕ್ಷಾತ್ಕಾರವನ್ನು ಹೊಂದಬಹುದೆಂದರು.

ನಿಕಟಪೂರ್ವ ತಹಸೀಲ್ದಾರ್ ಕವಿರಾಜ್, ಇನ್ಸ್‌ಪೆಕ್ಟರ್ ಬಸವರಾಜ್, ಶಿಕಾರಿಪುರ ಪರೋಪಕಾರಂ ತಂಡದ ಕೆ.ಹೆಚ್. ಲಕ್ಷ್ಮಣ್, ಮಧುಕೇಶ್ವರ, ಲಯನ್ಸ್ ಪ್ರಶಾಂತ್, ಮಹೇಶ್ವರ ಸ್ವಾಮಿ, ಆನಂದ ಕೃ? ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಆಶಾ ಕಾರ್ಯಕರ್ತೆ ನೇತ್ರಾವತಿ, ಮಾಜಿ ಸೈನಿಕ ರೇವಣಸಿದ್ದಪ್ಪ, ವಿಕಲಚೇತನ ಗುಡದಯ್ಯ, ಅಗ್ನಿಶಮಕ ದಳದ ಹೆಚ್.ಮಹಮದ್ ನೂರುಲ್ಲಾ, ಆರೋಗ್ಯ ಇಲಾಖೆಯ ಎಸ್.ಪ್ರವೀಣ್ ಕುಮಾರ್, ಮೇಸ್ತ್ರಿ ಪರಶುರಾಂ, ಪೊಲೀಸ್ ಇಲಾಖೆಯ ಕೊಟ್ರೇಶ್, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ ಮತ್ತಿತರರನ್ನು ಸನ್ಮಾನಿಸಲಾಯಿತು.

ನೇತ್ರದಾನ ನೋಂದಣಿ ಅಭಿಯಾನದಲ್ಲಿ 198 ಮಂದಿ ನೇತ್ರ ದಾನಕ್ಕೆ ಹೆಸರು ನೋಂದಾಯಿಸಿದರು. ಕಾಶಿಬಾಯಿ ಸ್ವಾಗತಿಸಿ, ದೈಹಿಕ ಶಿಕ್ಷಕ ಮಂಜುನಾಥ್ ಸ್ವಾಗತಿಸಿ, ಡಿ.ಡಿ.ಶಿವಕುಮಾರ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಓಟ್ ಮಾಡಲು ಮತಗಟ್ಟೆಗೆ ಹೋಗಲು ಆಗುವುದಿಲ್ಲವೇ? ಹಾಗಾದ್ರೆ ಹೀಗೆ ಮತ ಚಲಾಯಿಸಿ!

Next Post

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL