ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಭದ್ರಾ ನದಿ ಸಂಗಮದಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಹೊಳೆಹೊನ್ನೂರು ಸಮೀಪದ ಕೂಡ್ಲಿಯಲ್ಲಿ #Koodli ನಡೆದಿದೆ.
ಎಂಜಿನಿಯರಿಂಗ್ ವಿದ್ಯಾರ್ಥಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಿವಾಸಿ ಹರ್ಷಿತ್ (23) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ.
Also read: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪ ನಾಗರಾಜಯ್ಯ ಚಾಲನೆ
ಮಹಾಲಯ ಅಮಾವ್ಯಾಸೆ ಹಿನ್ನೆಲೆ ಪಿತೃಪಕ್ಷದ ಪೂಜೆಗೆಂದು ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ ಯುವಕ ಪೂಜೆ ಸಲ್ಲಿಸಿದ ನಂತರ ತುಂಗಭದ್ರಾ ನದಿ ಸಂಗಮದಲ್ಲಿ ಸ್ನಾನಕ್ಕೆಂದು ತೆರಳಿದ್ದು, ಈ ವೇಳೆ ಸಂಗಮ ಸ್ಥಳದಲ್ಲಿ ನೀರಿನ ಹರಿವು ಹೆಚ್ಚಿತ್ತು. ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಕೊಚ್ಚಿ ಹೋಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಯುವಕನ ಸುಳಿವು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್’ಪೆಕ್ಟರ್ ಲಕ್ಷ್ಮೀಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದೂ ಕೂಡ ಸಂಗಮ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post