No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ. 22ರಿಂದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವ: ಕಾರ್ಯಕ್ರಮಗಳ ವಿವರ ಹೀಗಿದೆ

kalpa News by kalpa News
March 16, 2022
in ಶಿವಮೊಗ್ಗ
0
ಮಾ. 22ರಿಂದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವ: ಕಾರ್ಯಕ್ರಮಗಳ ವಿವರ ಹೀಗಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದಲ್ಲಿಯೇ ಅತ್ಯಂತ ಹೆಸರು ಪಡೆದಿರುವ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವವು Kote Shri Marikamba Jathre ಮಾರ್ಚ್ 22ರಿಂದ 26ರ ವರೆಗೆ ಅತ್ಯಂತ ವಿಜೃಂಭಣೆಯಿಂದ, ಸಡಗರ – ಸಂಭ್ರಮಗಳಿಂದ ಆಚರಿಸಲಾಗುವುದು ಎಂದು ಶ್ರೀ ಕೋಟೆ ಮಾರಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದರು.

ದೇವಾಲಯದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಣೆ ನೀಡಿದ ಅವರು, ಮಾ.22ರಂದು ಮಂಗಳವಾರ ಗಾಂಧಿ ಬಜಾರ್ ನಲ್ಲಿ ಬೆಳಿಗ್ಗೆ 6 ಗಂಟೆಗೆ ಶ್ರೀ ಅಮ್ಮನವರಿಗೆ ವಿಶೇಷ ಪೂಜೆ ಆರಂಭವಾಗುತ್ತದೆ. ಅಂದು ಬ್ರಾಹ್ಮಣ ನಾಡಿಗ ಕುಟುಂಬದ ಮನೆಗೆ ಹೋಗಿ ವೀಳ್ಯ ಕೊಟ್ಟು ಮಂಗಳವಾದ್ಯದೊಂದಿಗೆ ಪೂಜಿಸಲಾಗುತ್ತದೆ. ನಂತರ ಕುಂಬಾರ ಜನಾಂಗದವರಿಂದ ಬಾಸಿಂಗದ ಜೊತೆ ಕರೆತರಲಾಗುವುದು. ಬ್ರಾಹ್ಮಣ ಸುವಾಸಿನಿಯರು ದೇವಿಗೆ ಹುಡಿ ತುಂಬಿ ಪೂಜಿಸುವರು. ನಂತರ ವಿಶ್ವಕರ್ಮ ಜನಾಂಗದವರಿಂದ ಇಡೀ ದಿನ ಪೂಜೆಯಾಗುತ್ತದೆ. ದೇವಿಯ ದರ್ಶನಕ್ಕೆ ಅಲ್ಲಿ ಭಕ್ತರಿಗೆ ಅನುವು ಮಾಡಿಕೊಡಲಾಗುವುದು.

ರಾತ್ರಿ ಸುಮಾರು 9 ಗಂಟೆಗೆ ಉಪ್ಪಾರ ಕುಲದವರು ದೇವಿಯನ್ನು ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಗದ್ದುಗೆಗೆ ಕರೆತರುತ್ತಾರೆ. ಇದರ ಮಧ್ಯೆ ಗಂಗಾಮತಸ್ಥ ಸಮಾಜದವರು ಗಟೇವುನೊಂದಿಗೆ ಗಾಂಧಿ ಬಜಾರ್ ನಲ್ಲಿ ದೇವರಿಗೆ ಎದುರುಗೊಂಡು ಪೂಜೆ ಸಲ್ಲಿಸುತ್ತಾರೆ. ಇದು ಸಂಪ್ರದಾಯವಾಗಿದೆ ಎಂದರು.

ಗದ್ದುಗೆ ಬಳಿ ದೇವಿ ಬಂದಾಗ ವಿದ್ಯಾನಗರದ ಕರ್ಲಹಟ್ಟಿಯ ಹರಿಜನ ಬಾಂಧವರು ಪೂಜೆ ಸಲ್ಲಿಸುತ್ತಾರೆ. ಗದ್ದುಗೆಯಲ್ಲಿ ದೇವಿ ಕೂರಿಸುತ್ತಿದ್ದಂತೆ ಕುರುಬ ಸಮಾಜದ ಚೌಡಿಕೆ ಮನೆತನದವರು ದೇವಿಗೆ ಪೂಜೆ ಸಲ್ಲಿಸಿ ನೈವೇದ್ಯ ಸಲ್ಲಸುತ್ತಾರೆ. ಬುಧವಾರ ಬೆಳಿಗ್ಗೆ 6.30ರಿಂದ ಇಡೀ ದಿನ ವಾಲ್ಮೀಕಿ, ಉಪ್ಪಾರರು, ಮಡಿವಾಳರು ಸೇರಿದಂತೆ ನಾಲ್ಕು ದಿನಗಳ ಕಾಲ ಅಮ್ಮನವರಿಗೆ ಸರತಿಯಂತೆ ಪೂಜೆ ಸಲ್ಲಿಸುತ್ತಾರೆ. ಈ ಮಧ್ಯೆ ಪೊಲೀಸರು, ಮಾಧ್ಯಮದವರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ವಿಶೇಷ ಪೂಜೆ
ಸಲ್ಲಿಸಲಿದ್ದಾರೆ ಎಂದರು.

Also read: ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

ದೇವರ ದರ್ಶನಕ್ಕೆ ಬರುವವರಿಗೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಭಾರೀ ಜನ ಪಾಲ್ಗೊಳ್ಳುವುದರಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಾತ್ರೆಯ ಯಶಸ್ವಿಗಾಗಿ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಜಾತ್ರೆಯ ಯಶಸ್ವಿಗಾಗಿ ಸಹಕಾರ ನೀಡಲಿವೆ ಎಂದರು.

ಒಟ್ಟಾರೆ ಜಾತ್ರೆಯು ಈ ಬಾರಿಯೂ ಕೂಡ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಲಕ್ಷಾಂತರ ಜನರು ಜಾತ್ರೆಯಲ್ಲಿ ಸೇರುವ ನಿರೀಕ್ಷೆ ಇದೆ. ಮಾ.24 ಮತ್ತು 25ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗೂ ಮಾ.22ರಿಂದ 26ರವರೆಗೆ ಪ್ರತಿದಿನ ಬೆಳಿಗ್ಗೆ 7ರಿಂದ ಹರಕೆ, ಪೂಜೆ ಹಾಗೂ ಪ್ರಸಾದ ವಿನಿಯೋಗವಿರುತ್ತದೆ ಎಂದರು.

ಕೋಟೆ ಶ್ರೀ ಮಾರಿಕಾಂಬ ಮಹೋತ್ಸವದ ಅಂಗವಾಗಿ ಮಾ.11ರಂದು ದೇವಾಲಯದ ಆವರಣದಲ್ಲಿ ಚಪ್ಪರ ಪೂಜೆ ನೆರವೇರಿಸಲಾಗಿದೆ. ಈ ಬಾರಿ ಜಾತ್ರೆಗಾಗಿ ಯಾರಿಂದಲೂ ಚಂದಾ ವಸೂಲಿ ಮಾಡುತ್ತಿಲ್ಲ. ದಾನಿಗಳೇ ದಿನಸಿ ಸಾಮಾನು, ಬೆಳ್ಳಿ ಹಾಗೂ ಇತರೆ ವಸ್ತುಗಳನ್ನು ನೀಡುತ್ತಿದ್ದಾರೆ. ಪಾಲಿಕೆ ವತಿಯಿಂದ 10ಲಕ್ಷ ರೂ. ನೀಡಲಾಗಿದೆ ಮತ್ತು ಇತರೆ ಸಂಘ ಸಂಸ್ಥೆಗಳು ಸಹ ಧನ ಸಹಾಯ ಮಾಡುತ್ತಿವೆ ಎಂದರು.

ಪ್ರತಿಬಾರಿಯೂ ಫೆಬ್ರವರಿ ತಿಂಗಳಲ್ಲಿ ಜಾತ್ರೆ ನಡೆಯುತ್ತಿತ್ತು. ಈ ಬಾರಿ ಕರೋನಾ ಹೆಚ್ಚಾಗಿದ್ದರಿಂದ ಜಿಲ್ಲಾಡಳಿತದ ಆದೇಶದ ಮೇರೆಗೆ ಜಾತ್ರೆಯನ್ನು ಮುಂದೂಡಿ ಮಾ.22ರಿಂದ ನಡೆಸಲು ತೀರ್ಮಾನಿಸಿದ್ದು, ಜಾತ್ರೆ ವಿಜೃಂಭಣೆಯಿಂದ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾ.18ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಜಾತ್ರೆ ನಡೆಸುವ ಬಗ್ಗೆ ಸಾರು ಹಾಕಲಾಗುವುದು ಎಂದರು.

ಶಿವಮೊಗ್ಗದ ಜನತೆ ಅತಿ ಸಂಭ್ರಮ ಸಡಗರದಿಂದ ಆಚರಿಸುವರಲ್ಲದೆ, ತಮ್ಮ ನಂಟರಿಷ್ಟರನ್ನು ಆಹ್ವಾನಿಸಿ ಐದು ದಿನಗಳು ನಡೆಯುವ ಈ ಜಾತ್ರೆಯಲ್ಲಿ ಪಾರಮ್ಯವನ್ನು ಮೆರೆಯುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯದ ಪ್ರತೀಕವಾಗಿ ಸ್ನೇಹ-ಸಂಬಂಧಗಳನ್ನು ಗಟ್ಟಿಗೊಳಿಸುವ ಮಧುರ ಘಳಿಗೆಯೂ ಆಗಿದೆ ಎಂದರು.

ಮಾರ್ಚ್ 26ರಂದು ರಾತ್ರಿ 8 ಗಂಟೆಗೆ ರಾಜಬೀಧಿ ಉತ್ಸವ ನಡೆಯಲಿದೆ. ಗಾಂಧಿ ಬಜಾರ್, ಬಿ.ಹೆಚ್. ರಸ್ತೆ ಮೂಲಕ ಹೊನ್ನಾಳಿ ರಸ್ತೆಯ ಮೇಲ್ಸೇತುವೆ ದಾಟಿ ಅಲ್ಲಿರುವ ಅರಣ್ಯದಲ್ಲಿ ಅಮ್ಮನವರ ಮೂರ್ತಿಯನ್ನು ವಿಸರ್ಜಿಸುವ ಮೂಲಕ ಜಾತ್ರೆಯನ್ನು ಸಂಪನ್ನಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕೋಟೆ ಮಾರಿಕಾಂಬ ಸೇವಾ ಸಮಿತಿಯ ಎನ್. ಮಂಜುನಾಥ್, ಉಪಾಧ್ಯಕ್ಷ ಉಮಾಪತಿ, ಪ್ರಮುಖರಾದ ಶಂಕರ್ ಗನ್ನಿ, ಎಂ.ಕೆ. ಸುರೇಶ್‌ಕುಮಾರ್, ಎಸ್.ಸಿ. ಲೋಕೇಶ್, ಎಸ್.ಹನುಮಂತಪ್ಪ, ಟಿ.ಎಸ್. ಚಂದ್ರಶೇಖರ್, ಎಸ್.ಜಿ. ಪ್ರಭಾಕರ ಗೌಡ,  ಎನ್. ಶ್ರೀಧರಮೂರ್ತಿ ನವುಲೆ, ಸುನೀಲ್, ಪ್ರಕಾಶ್ ಮೊದಲಾದವರಿದ್ದರು.

ಜಾತ್ರೆಯ ತಯಾರಿ ಹೀಗಿದೆ:

  • ಮೊದಲ ಬಾರಿಗೆ 16.6 ಅಡಿ ಎತ್ತರದ ಬೃಹತ್ ಅಮ್ಮನವರ ಮೂರ್ತಿ ಪ್ರತಿಷ್ಠಾಪನೆ
  • ಅಮ್ಮನವರ ಮೂರ್ತಿಗೆ ಬೆಳ್ಳಿ ಪಾದುಕೆ, ಸೊಂಟಕ್ಕೆ ಪಟ್ಟಿ ಹಾಗೂ ಎರಡು ಸೀರೆ ಧಾರಣೆ.
  • ಅಮ್ಮನವರ ಮೂರ್ತಿಗೆ ಖ್ಯಾತ ಶಿಲ್ಪಿ ಕಾಶಿನಾಥ್ ಅವರಿಂದ ಅಲಂಕಾರ
  • ಈ ಬಾರಿ ಕುಸ್ತಿ ಪಂದ್ಯಾವಳಿ ಇರುವುದಿಲ್ಲ.
  • ಜಾತ್ರೆಯ ಯಶಸ್ಸಿಗೆ 19 ಉಪ ಸಮಿತಿಗಳ ರಚನೆ
  • ಗಣ್ಯ ಮತ್ತು ಅತಿಗಣ್ಯರಿಗೆ ಪ್ರತ್ಯೇಕ ಪ್ರವೇಶ
  • ದೇವಾಲಯದ ಸುತ್ತಮುತ್ತ ಈ ಬಾರಿ ಯಾವುದೇ ಸ್ಟಾಲ್ ಗಳಿಗೆ ಅವಕಾಶವಿಲ್ಲ. ದೇವಸ್ಥಾನದಿಂದ ದೂರದಲ್ಲಿ ಅವಕಾಶ ಕಲ್ಪಿಸಲಾಗಿದೆ.
  • ನಾಳೆ ಬಾಬುದಾರರ (ಸರ್ವ ಜನಾಂಗದ ಮುಖಂಡರು) ಸಭೆ
  • ರಕ್ಷಣಾ ವ್ಯವಸ್ಥೆಗೆ ಆದ್ಯತೆ
  • ಹಲವು ಕಡೆ ತೀರ್ಥ ಪ್ರಸಾದದ ವ್ಯವಸ್ಥೆ
  • ಮಡಿಲಕ್ಕಿ, ಕಾಯಿ ಒಡೆಯಲು, ಸೀರೆ ಕೊಡಲು ಪ್ರತ್ಯೇಕ ಕೌಂಟರ್ ಗಳು
  • ಐದು ದಿನಗಳ ಕಾಲವೂ ಊಟ, ಉಪಾಹಾರ, ರಾತ್ರಿ ಊಟದ ವ್ಯವಸ್ಥೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKote Shri Marikamba JathreLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

Next Post

ಸಾಗರದ ಕುಗ್ವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

kalpa News

kalpa News

Next Post
ಸಾಗರದ ಕುಗ್ವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಸಾಗರದ ಕುಗ್ವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL