ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ) #Karnataka State Cricket Association ಆಡಳಿತ ಮಂಡಳಿಯ 2025-28ನೇ ಸಾಲಿನ ಚುನಾವಣೆ ಡಿ.7ರಂದು ನಡೆಯಲಿದ್ದು, ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ ಎಂದು ಕೆಎಸ್‍ಸಿಎ ಹಾಲಿ ಅಧ್ಯಕ್ಷ ಖ್ಯಾತ ಕ್ರಿಕೆಟ್ ಪಟು ಬ್ರಿಜೇಶ್‍ಪಟೇಲ್ #Brijesh Patel ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿ ಕೆಎಸ್‍ಸಿಎ ದೇಶಕ್ಕೆ ಮಾದರಿಯಾಗಿದೆ. ಇಲ್ಲಿಯವರೆಗಿನ ತಾವು ನಿರ್ವಹಿಸಿದ ಉತ್ತಮ ಆಡಳಿತಕ್ಕೆ ಯಾರಿಂದಲೂ ಪ್ರಮಾಣಪತ್ರ ಬೇಕಾಗಿಲ್ಲ. 2010 ಮತ್ತು 2013ರಲ್ಲಿ ಏನೂ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂಬ ತಮ್ಮ ವಿರೋಧಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಆಡಳಿತಾವಧಿಯಲ್ಲಿ ಕೆಪಿಎಲ್, ಮಹಾರಾಜ ಕಪ್, ರಣಜಿಟ್ರೋಫಿ, ವಿಜಯಹಜಾರೆ ಕಪ್, ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೊದಲಾದವುಗಳನ್ನು ಗೆದ್ದು ತಮ್ಮ ಅವಧಿಯ ಆಡಳಿತದ ವೈಖರಿಯನ್ನು ಪ್ರದರ್ಶಿಸಿದ್ದೇವೆ ಎಂದು ತಿರುಗೇಟು ನೀಡಿದರು.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನೊಳಗೊಂಡ ಶಿವಮೊಗ್ಗ ವಲಯದಲ್ಲಿ 55 ಸದಸ್ಯರಿದ್ದಾರೆ. ತಮ್ಮ ಸದಸ್ಯತ್ವದ ಅವಧಿಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಸಮಾಧಾನ ನನಗಿದೆ. 12ವರ್ಷದೊಳಗಿನ ಬಾಲಕರಿಗೆ ಮಂಡಳಿಯಿಂದ ತರಬೇತಿ ನೀಡಲು ನಾವು ಸಿದ್ಧರಿದ್ದೇವೆ. ಆಸಕ್ತರು ತಮ್ಮ ಮೊಬೈಲ್ ನಂಬರಿಗೆ 9845353867 ಸಂಪರ್ಕಿಸಬಹುದು.
ಡಿ.ಎಸ್. ಅರುಣ್, ಹಾಲಿ ಶಿವಮೊಗ್ಗ ವಲಯಸದಸ್ಯ
ಕ್ರಿಕೆಟ್ ಆಟದ ಮೈದಾನ, ಅಲ್ಲಿಯ ಮೂಲಭೂತ ಸೌಕರ್ಯ, ವೆಚ್ಚದ ಬಿಲ್‍ಗಳ ಬಗ್ಗೆ ವಿರೋಧಿಗಳು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದು, ಎಲ್ಲಿಯೂ ಹಣಕಾಸಿನ ಅವ್ಯವಹಾರ ನಡೆದಿಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಮಾಡಿದ್ದೇವೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ 8 ಟರ್ಫ್ ಗ್ರೌಂಡ್‍ಗಳನ್ನು ನಿರ್ಮಿಸಿದ್ದೇವೆ. ತಾಲ್ಲೂಕು ಮಟ್ಟದಲ್ಲಿಯೂ ಕ್ರಿಕೆಟ್ ಬಗ್ಗೆ ಜಾಗೃತಿಮೂಡಿಸಲು ಕಾರ್ಯನಿರ್ವಹಿಸಿದ್ದೇವೆ ಎಂದರು.

ಇತ್ತೀಚೆಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಕೆ.ಎಸ್.ಸಿ.ಎ.ಯ ಯಾವ ಪಾತ್ರವೂ ಇಲ್ಲ. ಆದರೂ ಇದರ ಆಡಳಿತ ಮಂಡಳಿಯ ಕೆಲವು ಸದಸ್ಯರೇ ತಮ್ಮ ಸಂಘಟನೆಯ ರಕ್ಷಣೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸಂಘದ ವಿರುದ್ಧವಾಗಿ ಮಾತನಾಡಿದ್ದು ವಿಷಾಧನೀಯ. ಇಲ್ಲಿಯವರೆಗೆ 750 ಪಂದ್ಯಾವಳಿಯನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಸಧ್ಯದಲ್ಲಿಯೇ ಬೃಹತ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಧ್ಯಕ್ಷೀಯ ಅಭ್ಯರ್ಥಿ ಕೆ.ಎನ್. ಶಾಂತಕುಮಾರ್ ಮಾತನಾಡಿ, 9 ದಶಕಗಳ ಕೆ.ಎಸ್.ಸಿ.ಎ.ಗೆ ದೀರ್ಘ ಹಾಗೂ ವೈಭವದ ಇತಿಹಾಸವಿದೆ. ತಮಗೆ ಕ್ರಿಕೆಟ್ ಕ್ಷೇತ್ರದಲ್ಲಿ ಅನುಭವವಿದೆ. ಕ್ರೀಡಾಪಟುವಾಗಿ, ಆಡಳಿತ ನಡೆಸಿದ ಅನುಭವವಿದೆ. ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ ಆದ್ದರಿಂದ ಮಂಡಳಿಯ ಸದಸ್ಯರು ತಮಗೆ ಮತನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಜಯರಾಂ, ರಘುರಾಂ ಭಟ್, ಬಿ.ಕೆ. ರವಿ, ತಿಲಕ್ ನಾಯ್ಡು, ಸಂಜಯ್ ಪೌಲ್, ಕುಶಾಲ್ ಪಾಟೀಲ್, ಡಿ.ಆರ್.ನಾಗರಾಜ್, ಐಡಿಯಲ್ ಗೋಪಿ, ಶಿವಪ್ಪ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post