No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ : ಇಂದು ಸಂಜೆ ಕೆಎಸ್‌ಸಿಎ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

₹4.90 ಕೋಟಿ ವೆಚ್ಚದಲ್ಲಿ ನಿರ್ಮಾಣ; ನಾಲ್ಕು ಪಿಚ್‌, ಒಳಾಂಗಣ ಟರ್ಫ್ ಹಾಗೂ ಜಿಮ್ ಸೇರಿದಂತೆ ಆಧುನಿಕ ತರಬೇತಿ ಸೌಲಭ್ಯ

kalpa News by kalpa News
September 29, 2026
in News, ಶಿವಮೊಗ್ಗ
0
Shivamogga KSCA Indoor Stadium Stone Laying Today
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ |

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವತಿಯಿಂದ ಶಿವಮೊಗ್ಗ (Shivamogga) ನಗರದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಗೆ ಇಂದು ಸಂಜೆ 5 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್‌ಸಿಎ ನಿರ್ದೇಶಕ ಡಿ.ಎಸ್. ಅರುಣ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡಿನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವುದರಿಂದ ವಿವಿಧ ವಯೋಮಾನದ ಕ್ರಿಕೆಟಿಗರಿಗೆ ನಿರಂತರ ಅಭ್ಯಾಸ ನಡೆಸಲು ತೊಂದರೆಯಾಗುತ್ತಿದೆ. ಹಲವು ವರ್ಷಗಳಿಂದ ಇದ್ದ ಬೇಡಿಕೆಯ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸುಸಜ್ಜಿತ ಒಳಾಂಗಣ ಅಭ್ಯಾಸ ವ್ಯವಸ್ಥೆ ನಿರ್ಮಿಸಲಾಗುತ್ತಿದೆ ಎಂದರು.

₹4.90 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ

ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸುಮಾರು ₹4.90 ಕೋಟಿ ವೆಚ್ಚವಾಗಲಿದೆ. ಹೊರಾಂಗಣ ಮೈದಾನದಲ್ಲಿ ಆಡುವ ಅನುಭವ ದೊರೆಯುವ ರೀತಿಯಲ್ಲಿ ಒಳಾಂಗಣ ಟರ್ಫ್ ವ್ಯವಸ್ಥೆ ಕಲ್ಪಿಸಲಾಗುವುದು. ನಾಲ್ಕು ಪಿಚ್‌ಗಳನ್ನು ನಿರ್ಮಿಸುವುದರ ಜತೆಗೆ ಆಟಗಾರರಿಗೆ ಜಿಮ್ ಸೇರಿದಂತೆ ಅಗತ್ಯ ತರಬೇತಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಡಿ.ಎಸ್. ಅರುಣ್ ಹೇಳಿದರು.

dk shivakumar led karnataka government 100 days celebration

ಗಣ್ಯರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ

ಕೆಎಸ್‌ಸಿಎ ಅಧ್ಯಕ್ಷ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Also Read>> ಶಿಕಾರಿಪುರದಲ್ಲಿ ‘ನಮೋ ಸೇವಾ ಗಾಥಾ’ ನಾಟಕ ಪ್ರದರ್ಶನ

ಕೆಎಸ್‌ಸಿಎ ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ಬಿ.ಎನ್. ಮಧುಕರ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು. ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷ ನಾಗೇಂದ್ರ ಕೆ. ಪಂಡಿತ್, ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಶಿವಮೊಗ್ಗ ವಲಯದ ಸಂಚಾಲಕ ಡಿ.ಎಸ್. ಅರುಣ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕ್ರಿಕೆಟ್ ಕ್ಲಬ್‌ಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

₹5.80 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ

ಕೆಎಸ್‌ಸಿಎ ಮೈದಾನದ ಸಮೀಪದಲ್ಲಿರುವ ಕೆರೆಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು ₹5.80 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಹಂತದ ಅನುಮೋದನೆಗಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ (ಡಿಎಂಎ) ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರುಣ್ ತಿಳಿಸಿದರು.Kalahamsa Infotech private limited

Shivamogga: ಶಿವಮೊಗ್ಗವನ್ನು ಕ್ರಿಕೆಟ್ ಹಬ್ ಮಾಡುವ ಗುರಿ

ಶಿವಮೊಗ್ಗವನ್ನು ಕ್ರಿಕೆಟ್ ಹಬ್ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಪಂದ್ಯಾವಳಿ ಹಾಗೂ ತರಬೇತಿ ವ್ಯವಸ್ಥೆಗಳನ್ನು ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ. ಈಗಾಗಲೇ ಗೋವಾದ ಮಾಜಿ ಕ್ರಿಕೆಟಿಗರು ಶಿವಮೊಗ್ಗಕ್ಕೆ ಆಗಮಿಸಿ ಪಂದ್ಯಗಳನ್ನು ಆಡಿದ್ದಾರೆ. ಮುಂದಿನ ದಿನಗಳಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಶಿವಮೊಗ್ಗಕ್ಕೆ ಆಗಮಿಸಿ ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ಪಂಡಿತ್, ಸುಕುಮಾರ್ ಪಟೇಲ್, ಶೈಲೇಶ್ ಕುಮಾರ್, ಸುಬ್ರಹ್ಮಣ್ಯ, ಸಂಜಯ್ ಕುಮಾರ್, ಕಿರಣ್, ಯಶವಂತ್ ನಾಯ್ಕ್ ಹಾಗೂ ಆರ್.ಪಿ. ನಾಗರಾಜ್ ಉಪಸ್ಥಿತರಿದ್ದರು.

“2027ರ ರಣಜಿ ಟ್ರೋಫಿ ಪಂದ್ಯಾವಳಿಯ ಕರ್ನಾಟಕ–ಪಂಜಾಬ್ ನಡುವಿನ ಪಂದ್ಯವು ಫೆಬ್ರುವರಿ 1ರಿಂದ ನಗರದ ಕೆಎಸ್‌ಸಿಎ ನವುಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.”

— ಡಿ.ಎಸ್. ಅರುಣ್, ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್‌ಸಿಎ ನಿರ್ದೇಶಕPES Shivamogga

ನವುಲೆ ಕ್ರೀಡಾಂಗಣದಲ್ಲಿ ಶೀಘ್ರ ಫ್ಲಡ್‌ಲೈಟ್ ವ್ಯವಸ್ಥೆ

ನವುಲೆ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಧುನಿಕ ಫ್ಲಡ್‌ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದು ಡಿ.ಎಸ್. ಅರುಣ್ ಹೇಳಿದರು.

ಫ್ಲಡ್‌ಲೈಟ್ ವ್ಯವಸ್ಥೆ ಕಲ್ಪಿಸಿದರೆ ರಾತ್ರಿ ವೇಳೆಯಲ್ಲಿಯೂ ಕ್ರಿಕೆಟ್ ತರಬೇತಿ ಹಾಗೂ ಪಂದ್ಯಗಳನ್ನು ಆಯೋಜಿಸಲು ಅನುಕೂಲವಾಗಲಿದೆ. 2027ರೊಳಗೆ ಫ್ಲಡ್‌ಲೈಟ್ ವ್ಯವಸ್ಥೆ ಜಾರಿಯಾದಲ್ಲಿ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯಗಳನ್ನು ಶಿವಮೊಗ್ಗದಲ್ಲೇ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

2026ರ ಮಹಾರಾಜ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಶಿವಮೊಗ್ಗ ಯೋಧಾಸ್ ತಂಡವು ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿದೆ. ಶಿವಮೊಗ್ಗದಲ್ಲಿ ಕ್ರಿಕೆಟ್‌ಗೆ ಉತ್ತಮ ಸ್ಪಂದನೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಪಟುಗಳಿಗೆ ಆಧುನಿಕ ಮೂಲಸೌಕರ್ಯ ಕಲ್ಪಿಸಿ ಕ್ರಿಕೆಟ್ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalpa News Advertising Disclaimer

Tags: KSCAksca stadiumShivamoggaSportsಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏಷ್ಯನ್ ಗೇಮ್ಸ್‌ನಲ್ಲಿ ನೀರು ಧಾಂಡಾ ಐತಿಹಾಸಿಕ ಸಾಧನೆ: ಮಹಿಳಾ ಟ್ರ್ಯಾಪ್‌ನಲ್ಲಿ ಚಿನ್ನ, ಏಷ್ಯನ್ ದಾಖಲೆ

Next Post

ಸೆ. 30 | ಶಿಕಾರಿಪುರದಲ್ಲಿ ‘ಭಾರತ್ ಜೋಡೋ’ ನೆನಪಿಗಾಗಿ ಬೃಹತ್ ಪಾದಯಾತ್ರೆ

kalpa News

kalpa News

Next Post
shikaripura bharat jodo padayatra sep 30

ಸೆ. 30 | ಶಿಕಾರಿಪುರದಲ್ಲಿ ‘ಭಾರತ್ ಜೋಡೋ’ ನೆನಪಿಗಾಗಿ ಬೃಹತ್ ಪಾದಯಾತ್ರೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL