No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2026
in ಶಿವಮೊಗ್ಗ
0
ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರು ಸಹ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಇಂದು ಬೆಳಗ್ಗೆ ಎನ್’ಎಸ್’ಯುಐ #NSUI ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಕಚೇರಿಯ ನಾಮಫಲಕಗಳಿಗೆ ಮಸಿ ಬಳಿದು, ಪೀಠೋಪಕರಣ, ಪಾಟ್‌ಗಳನ್ನು ಹೊಡೆದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Also Read>> ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ #KuvempuUniversity ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್’ಎಸ್’ಯುಐ ಖಂಡಿಸಿತು.ಕಳೆದ ಐದು ತಿಂಗಳ ಹಿಂದೆ ನಡೆದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು.

Also Read>> ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು.ಪ್ರತಿಭಟನೆಯ ವೇಳೆ ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಅಲ್ಲಿನ ಪೀಠೋಪಕರಣ ಹಾಗೂ ನಾಮಫಲಕಗಳನ್ನು ಕಿತ್ತೆಸೆದಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಭದ್ರತಾ ಸಿಬ್ಬಂದಿಯನ್ನು ವಿದ್ಯಾರ್ಥಿಗಳು ತಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಎನ್’ಎಸ್’ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ ಸೇರಿದಂತೆ ನೂರಾರು ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಸೇರಿದಂತೆ ನೂರಾರು ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKuvempu UniversityLatest News KannadaLocal NewsMalnad NewsNSUIprotestShimogaShivamoggaShivamogga Newsಎನ್’ಎಸ್’ಯುಐಕುವೆಂಪು ವಿಶ್ವವಿದ್ಯಾಲಯಶರತ್ ಅನಂತಮೂರ್ತಿಶಿವಮೊಗ್ಗ
Share207Tweet130Send
Previous Post

ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಸದ್ಭಾವನ ಟ್ರಸ್ಟ್‌ ಅಧ್ಯಕ್ಷ ಎಂ. ಶ್ರೀಕಾಂತ್

Next Post

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL