No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Monday, November 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳೆಯ ಹತ್ಯೆಗೈದು ಲಕ್ಷಾಂತರ ರೂ. ದೋಚಿದ್ದ ಆರೋಪಿಗಳು ಪೊಲೀಸ್ ವಶಕ್ಕೆ

kalpa News by kalpa News
June 30, 2023
in ಶಿವಮೊಗ್ಗ
0
ಮಹಿಳೆಯ ಹತ್ಯೆಗೈದು ಲಕ್ಷಾಂತರ ರೂ. ದೋಚಿದ್ದ ಆರೋಪಿಗಳು ಪೊಲೀಸ್ ವಶಕ್ಕೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ 33,74,800 ರೂ. ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ 7 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲ್ಲಿಕಾರ್ಜುನ್ ಅವರ ಕಾರು ಚಾಲಕನಾಗಿದ್ದ ಹುಣಸೋಡು ತಾಂಡಾದ ಹನುಮಂತನಾಯ್ಕ(22), ಗುಂಡಪ್ಪ ಶೆಡ್ನ  ಪ್ರದೀಪ್ ವಿ. ಯಾನೆ ಮೊದಲಿಯಾರ್(21), ಅನುಪಿನಕಟ್ಟೆ ತಾಂಡಾದ ಅಪ್ಪುನಾಯ್ಕ ಸಿ. ಯಾನೆ ಅಪ್ಪು(21),  ಗುಂಡಪ್ಪ ಶೆಡ್ನ ಸತೀಶ್ ವಿ.(26), ಅನುಪಿನಕಟ್ಟೆ ತಾಂಡಾದ ರಾಜು ವೈ. ಯಾನೆ ತೀತಾ(24) ಬಂಧಿತ ಆರೋಪಿಗಳಾಗಿದ್ದಾರೆ ಎಂದ ಅವರು, ಈ ಕೃತ್ಯಕ್ಕೆ ಕಾರು ನೀಡಿದ್ದ ಕೌಶಿಕ್ ಎಂಬ 7ನೇ ಆರೋಪಿಯನ್ನು ಕೂಡ ನಿನ್ನೆ ಬಂಧಿಸಲಾಗಿದೆ ಎಂದರು.
ಇಂಜಿನಿಯರ್ ಕೆ.ವಿ. ಮಲ್ಲಿಜಕಾರ್ಜುನ ಅವರು ತಮ್ಮ ಮಗನ ವೈದ್ಯಕೀಯ ಶಿಕ್ಷಣಕ್ಕೆ ಶುಲ್ಕ ಕಟ್ಟುವ ಸಲುವಾಗಿ 37 ಲಕ್ಷ ರೂ. ಕೈ ಸಾಲ  ಪಡೆದು ಮನೆಯಲ್ಲಿ ತಂದಿಟ್ಟಿದ್ದರು. ಈ ಎಲ್ಲಾ ಹಣವನ್ನು ಚಾಲಕ ಹನುಮಂತನಾಯ್ಕ ಮೂಲಕವೇ ಸ್ನೇಹಿತರ ಬಳಿಯಿಂದ ತರಿಸಿ ಮನೆಯಲ್ಲಿಟ್ಟಿದ್ದರು. ಹೀಗಾಗಿ ಈ ಹಣ ಲಪಟಾಯಿಸುವ ಉದ್ದೇಶದಿಂದ ಹನುಮಂತನಾಯ್ಕ ಸ್ನೇಹಿತರೊಂದಿಗೆ ಸೇರಿ ತಂತ್ರ ರೂಪಿಸಿದ್ದ ಎಂದರು.

ಮಲ್ಲಿಕಾರ್ಜುನ ಅವರು ಗೋವಾಕ್ಕೆ ತೆರಳಿದ ಸಂದರ್ಭ ನೋಡಿಕೊಂಡ ಆರೋಪಿ ಹನುಮಂತನಾಯ್ಕ ತನ್ನ ಸೋದರನಿಗೆ ಅಪಘಾತವಾಗಿದ್ದು, ಆತನ ಚಿಕಿತ್ಸೆಗೆ 2 ಸಾವಿರ ಹಣ ಬೇಕೆಂದು ಜೂ.16 ರ ರಾತ್ರಿ ಮಲ್ಲಿಕಾರ್ಜುನ ಅವರ ಮನೆಗೆ ಹೋಗಿ ಕಮಲಮ್ಮನವರ ಬಳಿ ಕೇಳಿದ್ದ. ಆ ಸಂದರ್ಭದಲ್ಲಿ ಹಣ ನೀಡದೆ ಮಾರನೇ ದಿನ ಬರುವಂತೆ ಹೇಳಿದ್ದರು ಎಂದರು.
ಇದನ್ನು ತನ್ನ ಸ್ನೇಹಿತರಿಗೆ ತಿಳಿಸಿದ ಆರೋಪಿ ಹನುಮಂತನಾಯ್ಕ ಜೂ.17 ರಂದು ರೆಮ್ಯಾಟೋ ಕಂಪನಿಯ ಟೀ ಶರ್ಟ್  ಖರೀದಿಸಿ ಮೂವರೂ ಧರಿಸಿಕೊಂಡು ಮನೆಯ ಬಳಿ ಹೋಗಿ ಚಿಕಿತ್ಸೆಗೆ ಹಣ ಕೇಳಿದ್ದಾರೆ. ಕೊಡಲು ಅವರು ನಿರಾಕರಿಸಿದ್ದಾರೆ. ನೀರು ಕೊಡಲು ಕಮಲಮ್ಮ ಒಳಗೆ ಹೋಗಲು ತಿರುಗುತ್ತಿದ್ದಂತೆ ಅಪ್ಪುನಾಯ್ಕ ಹಿಂದೆಯೇ ಒಳಗೆ ಹೋಗಿ ಬಾಯಿ ಒತ್ತಿ ಹಿಡಿಯಲು ಮುಂದಾದಾಗ ಕಮಲಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಆಗ ಕಬ್ಬಿಣದ ಚೂಪಾದ ರಾಡಿನಿಂದ ಕುತ್ತಿಗೆಗೆ  ಹೊಡೆದು ಸಾಯಿಸಿದ್ದಾನೆ. ಬಳಿಕ ಹಣ ತೆಗೆದುಕೊಂಡು ಎಲ್ಲರೂ ಪರಾರಿಯಾಗಿದ್ದಾಗಿ ಒಪ್ಪಿಕೊಂಡಿರುವುದಾಗಿ ಹೇಳಿದರು.

ಬಳಿಕ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದರು. ಹೋಟೆಲ್ನಲ್ಲಿ ಉಳಿದು, ಹೊಸ ಮೊಬೈಲ್ಗಳನ್ನು ಖರೀದಿ ಮಾಡಿದ್ದರು. ಇನ್ನೋರ್ವ ಕೌಶಿಕ್ ಎಂಬಾತ ಇವರಿಗೆ ಕಾರು ನೀಡಿ ಸಹಾಯ ಮಾಡಿದ್ದು, ಆತನ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದರು.
35ಲಕ್ಷ ರೂ.ನಲ್ಲಿ 33,74,800 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೆ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಕಾರು, 7ಮೊಬೈಲ್, 3ಬೈಕ್, ಕೊಲೆ ಮಾಡಿದ ಆಯುಧ ಸೇರಿದಂತೆ ಸುಮಾರು 41,14,800 ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.

Also read: ಭೂಗತ ಕೇಬಲ್ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ: ಆತಂಕಗೊಂಡ ಸ್ಥಳೀಯರು

ಆರೋಪಿಗಳೆಲ್ಲರೂ ಕೂಲಿ ಹಾಗೂ ಗಾರೆ ಕೆಲಸ ಮಾಡುವವರಾಗಿದ್ದಾರೆ. ಇವರೆಲ್ಲರೂ ಟೀ, ಮದ್ಯದಂಗಡಿಗಳನ್ನು ಅಡ್ಡೆಯಾಗಿ ಮಾಡಿಕೊಂಡಿದ್ದರು. ಇವರ ಪರಿಚಯ ಮಾಡಿಕೊಂಡ ಡ್ರೈವರ್ ಹನುಮಂತನಾಯ್ಕ್ ಮನೆಯಲ್ಲಿ ಹಣ ಇರುವುದು ಖಚಿತ ಇದನ್ನು ದೋಚಬೇಕು ಎಂದು ಪ್ಲಾನ್ ಮಾಡಿದ್ದರು. ಹನುಂತನಾಯ್ಕ್ ಒಂದು ವರ್ಷದಿಂದ ಇಂಜಿನಿಯರ್ ಮಲ್ಲಿಕಾರ್ಜುನಪ್ಪ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಅವರು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಹಾಗಾಗಿ ಇವರ ಕುಟುಂಬಕ್ಕೆ ಹತ್ತಿರವಾಗಿದ್ದು, ಅವರ ವಿವರಗಳನ್ನು ತಿಳಿದುಕೊಂಡಿದ್ದ ಮತ್ತು ಹಣವನ್ನು ದೋಚಲು ಮುಂಚೆಯೇ ಉಪಾಯ ಮಾಡಿದ್ದ ಎಂದರು.
ದೋಚಿದ ಹಣದಲ್ಲಿ ಎಲ್ಲಾರು ಒಂದೊಂದು ಹೊಸ ಮೊಬೈಲ್ ತೆಗೆದುಕೊಂಡಿದ್ದರು. ಬೇರೆ ಬೇರೆ ಕಡೆ ಪರಾರಿಯಾಗಿ ಲಾಡ್ಜ್‌ಗಳಲ್ಲಿ ವಾಸವಾಗಿದ್ದರು. ತುಂಗಾನಗರ ಪೊಲೀಸರು ಮತ್ತು ಅಧಿಕಾರಿಗಳ ತನಿಖಾ ತಂಡ ಉತ್ತಮವಾಗಿ ಕೆಲಸ ನಿರ್ವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜು, ತುಂಗಾನಗರ ಪೊಲೀಸ್ ಠಾಣೆಯ ಮಂಜುನಾಥ್, ಪಿಎಸ್ಐ ಕುಮಾರ್, ರಘುವೀರ್, ಸಿಬ್ಬಂದಿಗಳಾದ ಕಿರಣ್, ರಾಜು, ಅರುಣ್ಕುಮಾರ್, ಅಶೋಕ್, ಮೋಹನ್, ಕೇಶವ್ ಕುಮಾರ್, ಕಾಂತರಾಜ್, ನಾಗಪ್ಪ, ಹರೀಶ್ನಾಯ್ಕ ಮತ್ತಿತರರು ಇದ್ದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೂಗತ ಕೇಬಲ್ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ: ಆತಂಕಗೊಂಡ ಸ್ಥಳೀಯರು

Next Post

ಟ್ವಿಟರ್ ಸಂಸ್ಥೆಗೆ 50ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

kalpa News

kalpa News

Next Post

ಟ್ವಿಟರ್ ಸಂಸ್ಥೆಗೆ 50ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL