ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಬಟ್ಟೆ, ಗ್ಯಾಸ್ ಸ್ಟೌವ್, ಅಕ್ಕಿ ಮತ್ತು ಒಣ ಅಡಿಕೆ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ.
ಅಮಾನತ್ತು ಪಡಿಸಿಕೊಂಡ ವಸ್ತುಗಳ ವಿವರ ಹೀಗಿದೆ:
ಎ.13ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 3,90,000ರೂ. ಗಳ 3 ಟನ್ ಒಣ ಅಡಿಕೆ, 31,000 ರೂ.ಗಳ 26 ಗ್ಯಾಸ್ ಸ್ಟೌವ್ ಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

Also read: ಬೀದರ್: ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ











Discussion about this post