ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್‌ನ ನೂತನ ಸದಸ್ಯರಾಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಶ್ರೀ ಲಕ್ಷ್ಮೀ ನಾರಾಯಣ ಕಾಶಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್ ಫೋರ್ಟ್ ರಚನೆ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಜಿಲ್ಲೆಯ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಜ್ಞಾನದ ಮೂಲಕ ಲಕ್ಷ್ಮೀ ನಾರಾಯಣ ಕಾಶಿ ಅವರು ಈಗಾಗಲೇ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರಾಗಿ ಹಲವು ಆಯಾಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಲಕ್ಷ್ಮೀ ನಾರಾಯಣ ಕಾಶಿ ಅವರಿಗೆ ಸಂಸದ ಬಿ.ವೈ. ರಾಘವೇಂದ್ರ, ಪ್ರಮುಖರಾದ ಬಿ.ವೈ. ವಿಜಯೇಂದ್ರ ಅಭಿನಂದಿಸಿದ್ದು, ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಹ ಶುಭ ಹಾರೈಸುತ್ತದೆ.
ಇನ್ನು, ರಾಜ್ಯ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗಾಗಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಇದರ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರು ಈಗಾಗಲೇ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.
Discussion about this post