ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಿನೋಬನಗರ ನಿವಾಸಿ ಲಲಿತಮ್ಮ ಸೀತಾರಾಮ ಜೋಯಿಸ್ (84) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಶಿವಮೊಗ್ಗದ ನಿವಾಸಿಯಾದ ಇವರು ಬೆಂಗಳೂರಿನ ತಮ್ಮ ಪುತ್ರನ ನಿವಾಸದಲ್ಲಿ ಕೊನೆಯುಸಿರೆಳೆದರು. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ನಿನ್ನೆ ರಾತ್ರಿ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲೇ ಶುಕ್ರವಾರ ಮಧ್ಯಾಹ್ನ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post