ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ಲ್ಯಾಂಡ್ ಜಿಹಾದ್ #Land Jihad ಮಾಡಲು ಹೊರಟಿದೆ. ಜಿಲ್ಲೆಯಲ್ಲಿ ರೈತರಿಗೆ ಭೂಮಿ ಕೊಡುವಲ್ಲಿ ಇಂಡೀಕರಣ ಮಾಡುವುದನ್ನು ಬಿಟ್ಟು ವಕ್ಫ್ ಆಸ್ತಿ ವಿಚಾರದಲ್ಲಿ ಆಸಕ್ತಿ ತೋರುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ #B Y Raghavendra ಆರೋಪಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸರ್ಕಾರಿ ಭೂಮಿಯನ್ನು ಇಂಡೀಕರಣ ಮಾಡಿ ಜನರಿಗೆ ಭೂಮಿ ಕೊಡಲು ಆಗುತ್ತಿಲ್ಲ. ರೈತರು, ಮಠ, ಮಂದಿರಗಳ ಆಸ್ತಿಯನ್ನು ವಕ್ಫ್ ಗೆ ಸೇರಿಸುವ ಆಸಕ್ತಿ ಯಾಕೆ?, ಒಂದು ಸಮುದಾಯವನ್ನು ಓಲೈಸಲು ರಾಜ್ಯದ ಕಾಂಗ್ರೇಸ್ ಸರ್ಕಾರ ಲ್ಯಾಂಡ್ ಜಿಹಾದ್ ನಡೆಸುತ್ತಿದೆ. ಬೇಕಾಬಿಟ್ಡಿ ಆಸ್ತಿಗಳ ಸ್ವಾಧೀನ ಪಡಿಸಿಕೊಳ್ಳಲು ಯತ್ನಿಸುತ್ತಿರುವ ರಾಜ್ಯ ಸರ್ಕಾರ ಹಿಂದೂಗಳ ಭೂಮಿಯನ್ನಷ್ಟೆ ಅಲ್ಲದೆ ಮುಸ್ಲಿಂ ಸಮುದಾಯದವರ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದ್ದು, ಧರ್ಮ-ಧರ್ಮಗಳ ನಡುವಿನ ವಿವಾದವನ್ನಾಗಿ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿಗೆ ಚಿಂತನೆ ನಡೆಸಿ, ಜಂಟೀ ಸಂಸದೀಯ ಮಂಡಳಿ ರಚನೆ ಮಾಡಿದ್ದರಿಂದ ಗಾಬರಿಯಾಗಿರುವ ವಿಪಕ್ಷಗಳು ಮನಬಂದAತೆ ವರ್ತಿಸುತ್ತಿವೆ. ಜಂಟೀ ಸಂಸದೀಯಮಂಡಳಿ ಸಭೆಗೆ ಹಾಜರಾಗದೆ ಯಾವ್ಯಾವ ರೀತಿ ಘಟನಾವಳಿಗಳು ನಡೆಯುತ್ತಿವೆ ಎಂಬುದು ಗೊತ್ತಾಗುತ್ತಿದೆ. ಯಾರನ್ನೋ ಓಲೈಸಲು ಈ ವರ್ತನೆ ರಾಜ್ಯ ಸರ್ಕಾರಕ್ಕೆ ಸರಿಯಲ್ಲ ಎಂದರು.
Also read: ಬೆಂಗಳೂರು | ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪಿಎಂ ಋಷಿ ಸುನಕ್ ಕುಟುಂಬ
ರಾಜ್ಯದಲ್ಲಿ ವಕ್ಫ್ ನ್ಯಾಯಾಲಯದಲ್ಲಿ ವಕ್ಫ್ ಆಸ್ತಿಯ ಅನಧಿಕೃತ ಒತ್ತುವರಿಯ 3720 ಪ್ರಕರಣಗಳ 319 ಎಕರೆ ಭೂಮಿಯ ಪ್ರಕರಣಗಳು ದಾಖಲಾಗಿವೆ. 1400 ಕ್ಕಿಂತ ಹೆಚ್ಚಿನ ಪ್ರಕರಣಗಳು ತೀರ್ಪಿಗೆ ಕಾದಿವೆ. ವ್ಯವಸ್ಥಿತವಾಗಿ ರಾಜ್ಯದಲ್ಲಿ ತರಾತುರಿಯಲ್ಲಿ ಉದ್ದೇಶಪೂರ್ವಕವಾಗಿ ವಕ್ಫ್ ಆಸ್ತಿ ಖಾತೆ ಏರಿಸಲು ಅಧಿಕೃತವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಬಿಜೆಪಿ ಇದರ ವಿರುದ್ದ ಹೋರಾಟ ಮುಂದುವರೆಸಲಿದೆ. ತಕ್ಷಣವೇ ರೈತರ, ಮಠಮಂದಿರಗಳ ಭೂಮಿಯನ್ನು ವಕ್ಫ್ ಖಾತೆಗೆ ಸೇರಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವರಾಜು, ಪದಾಧಿಕಾರಿಗಳಾದ ಹರಿಕೃಷ್ಣ, ವಿನ್ಸೆಂಟ್, ಗಣೇಶ್ ಬಿಳಕಿ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post