ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿನೋಬನಗರ ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ತಾಳಗುಪ್ಪ ಟ್ರೈನ್ಗೆ ತಲೆಕೊಟ್ಟು ಉಪನ್ಯಾಸಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಡಿವಿಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ವಿಶ್ವನಾಥ್ (70 ವರ್ಷ) ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.
ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ.
Also read: ಕಣಜದ ಹುಳುಗಳ ದಾಳಿಗೊಳಗಾದ ವ್ಯಕ್ತಿ ಸಾವು
ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಕಳೆದೆರಡು ದಿನಗಳ ಹಿಂದೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ವಾಕಿಂಗ್‌ಗೆಂದು ಹೊರ ಹೋಗಿದ್ದ ವಿಶ್ವನಾಥ್, ತಾಳಗುಪ್ಪ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ರೈಲ್ವೆ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post