ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು ಎಂದರು.
ಸರ್ಕಾರವು ಕೊರೋನ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಹಾಗೂ ಬೆಳೆದ ಬೆಳೆಯಿಂದ ರೈತರಿಗೆ ಉಂಟಾಗದಂತೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ತಮ್ಮ ಕೃಷಿ ಉತ್ಪನ್ನಗಳಾದ ಹೂವು ಹಣ್ಣು ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೆ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ಗಂಡನಿಗೆ ಗುರಿಪಡಿಸಲಾಗುವುದು ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೆ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೆ ನಲ್ಲಿ ಭಾಗವಹಿಸಿದ್ದರು ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶ ವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದರು.
ಸಂಸದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ಸರಿಗೆ ಗುಣಮಟ್ಟದ ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್ ಮ್ಯಾಪನ್ನು ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು ರೈತರಿಗೆ ಉಪಯುಕ್ತವಾಗಿದೆ ಎಂದ ಅವರು, ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ವಂತೆ ಅಧಿಕಾರಿಗಳಿಗೆ ಸೂಚಿಸಲು ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದರು.
ಭತ್ತ ಕಟಾವಿಗೆ ಬರುವ ಸಂದರ್ಭದಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭಗೊಳ್ಳಬೇಕು. ಪ್ರಸ್ತುತ ಸಂಕೀರ್ಣ ಸಂದರ್ಭದಲ್ಲಿ ರೈತರಿಗೆ ಉಚಿತವಾಗಿ ಬೀಜ ಮತ್ತು ಗೊಬ್ಬರ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
– ಆರ್. ಪ್ರಸನ್ನಕುಮಾರ್ಭತ್ತ ಖರೀದಿಸುವ ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸಿ.
– ಆಯನೂರು ಮಂಜುನಾಥ್ಲಾಕ್ ಡೌನ್ ನಿಂದಾಗಿ ಕಚೇರಿಗಳು ಮುಚ್ಚಿರುವುದರಿಂದ ಹಾಗೂ ಅಧಿಕಾರಿಗಳು ಸಕಾಲದಲ್ಲಿ ಲಭ್ಯವಾಗದಿರುವುದರಿಂದ ಕಳೆದ ಸಾಲಿನ ದಾಖಲೆಗಳ ಆಧಾರದ ಮೇಲೆ ಬೆಳೆಸಾಲ ಪಡೆಯಲು ಅನುಮತಿ ನೀಡುವಂತೆ ನೀಡಿ.
– ಆರಗ ಜ್ಞಾನೇಂದ್ರ
ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೀರಾವರಿ ಯೋಜನೆಗಳು ಪೂರ್ಣಗೊಂಡಿವೆ ಈ ಭಾಗದ ರೈತರು ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ ನೀಡುವಂತೆ ಕುಮಾರ್ ಬಂಗಾರಪ್ಪ ಮನವಿ ಮಾಡಿದರು.
ರಸಗೊಬ್ಬರದ ಬೆಲೆ ಇಳಿಕೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಅಭಿನಂದನೆ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post