ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಚಿರತೆ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಯಶೋದಮ್ಮ (42 ವರ್ಷ) ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ ಮಹಿಳೆ. ಈಕೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಯಶೋದಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮರವರ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಕುಟುಂಬದವರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯಶೋದಮ್ಮರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.
Also read: ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಸೊರಬ ಅಮರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಯಶೋದಮ್ಮರವರ ದೇಹದ ಭಾಗವೊಂದನ್ನು ಚಿರತೆ ತಿಂದಿದ್ದು, ಘಟನೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿನ ಹೆಜ್ಜೆ ಗುರುತುಗಳನ್ನ ಗಮನಿಸಿ ಚಿರತೆ ದಾಳಿ ನಡೆಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















