ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತವು ಜಾಗತಿಕವಾಗಿ ನಡೆಯುತ್ತಿರುವ ಯುದ್ಧಗಳಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಕಾರಣಕ್ಕೂ ಭಾಗಿಯಾಗದಿರಲಿ ಎಂದು ಹಾರೈಸೋಣ. ಜಗತ್ತಿನೆಲ್ಲೆಡೆ ಶಾಂತಿ ನೆಮ್ಮದಿ ನೆಲೆಗೊಳ್ಳಲಿ ಯುದ್ಧದ ಕಾರ್ಮೋಡ ಹಿಂದೆ ಸರಿಯಲಿ ಈ ಸ್ವಾತಂತ್ರೋತ್ಸವ ನಮ್ಮೆಲ್ಲರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಲಿ.
-ಡಾ.ಸಂಧ್ಯಾ ಕಾವೇರಿ
ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ತಂದುಕೊಟ್ಟ ಈ ಸ್ವಾತಂತ್ರವನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿ ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಬೇಕು ಎಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅಭಿಪ್ರಾಯಪಟ್ಟರು.
ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಶಿವಮೊಗ್ಗ, ಇವರ ವತಿಯಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಸಹಯೋಗದಲ್ಲಿ ಆಚರಿಸಲಾದ 79 ನೇ ಸ್ವತಂತ್ರ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ತಂದುಕೊಟ್ಟ ಈ ಸ್ವಾತಂತ್ರವನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು, ಪ್ರತಿ ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಬೇಕು ಕಟೀಲ್ ಅಶೋಕ್ ಪೈ ಸಮೂಹ ಸಂಸ್ಥೆಗಳು ಈ ಸಂಕಲ್ಪದ ಭಾಗವಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಈ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಕೆಲವು ದೃಢಸಂಕಲ್ಪವನ್ನು ಮಾಡುವುದರ ಮೂಲಕ ಸಮಾಜಮುಖಿ ಯೋಚನೆ ಮತ್ತು ಯೋಜನೆಗಳಿಂದ ಈ ಸ್ವಾತಂತ್ರವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದರು.

ಶೈಕ್ಷಣಿಕ ನಿರ್ದೇಶಕರಾದ ಪ್ರೊ. ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ಅರ್ಚನಾ ಭಟ್ ರಾಷ್ಟ್ರೀಯ ಸೇವಾ ಯೋಜನೆಯ ಘಟಕ-1,2 ರ ಕಾರ್ಯಕ್ರಮಾಧಿಕಾರಿಗಳಾದ ಡಾ. ಸುಕೀರ್ತಿ ಹಾಗೂ ಆರ್. ಮೋಹನ್ ಕುಮಾರ್ ಉಪಸ್ಥಿತರಿದ್ದರು.
ಕು. ತನ್ಮಯಿ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಗಿಡನೆಡುವ ಕಾರ್ಯಕ್ರಮ ನೆರವೇರಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post