ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಗೆ ಕಾಲೇಜುಗಳು ಹಾಗೂ ಉಪನ್ಯಾಸಕರು ಪ್ರೇರಕವಾಗಿ ಕೆಲಸ ಮಾಡಬೇಕು ಎಂದು ಖ್ಯಾತ ಬರಹಗಾರ ಡಾ. ಗಂಗಾಧರಯ್ಯ ಸಲಹೆ ನೀಡಿದರು.
ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಹಾಗೂ ಇಂಗ್ಲೀಷ್ ವಿಭಾಗದ ವತಿಯಿಂದ ಯುವ ಬರಹಗಾರರಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಥಾ ಕಮ್ಮಟದಲ್ಲಿ ಅವರು ಮಾತನಾಡಿದರು.
ಇನ್ನೊಬ್ಬ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಡಾ. ರಾಮಲಿಂಗಪ್ಪ ಟಿ. ಬೇಗೂರು ಮಾತನಾಡಿ, ವಿದ್ಯಾರ್ಥಿಗಳ ಮತ್ತು ಯುವ ಬರಹಗಾರರ ಕ್ರಿಯಾಶೀಲತೆಗೆ ಮತ್ತು ಶ್ರೇಯಸ್ಸಿಗೆ ಶ್ರಮಿಸುವುದೆ ಪ್ರಾಧ್ಯಪಕರ ಮತ್ತು ಕಾಲೇಜುಗಳ ಆದ್ಯಕರ್ತವ್ಯವಾಗಿದೆ ಎಂದು ತಿಳಿಸಿದರು. ಮತ್ತು ವಿದ್ಯಾರ್ಥಿಗಳ ಸಂವಹನ ಉತ್ತಮವಾಗಿದೆ ಎಂದು ಹರ್ಷಿಸಿದರು.
ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ, ನಾವು ಜಗತ್ತನ್ನು, ನಮ್ಮ ಸುತ್ತಲಿನ ವ್ಯಕ್ತಿಗಳನ್ನು ಅರಿಯುವುದು ಕಥೆಗಳ ಮೂಲಕ, ಕಥೆಗಳು ನಮ್ಮ ಜೀವನದ ಬಹುಮುಖ್ಯ ಭಾಗವಾಗಿವೆ ಎಂದು ಹೇಳಿದರು.
ಕಮ್ಮಟವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸಂಧ್ಯಾಕಾವೇರಿಯವರು, ಯುವ ಬರಹಗಾರರ ಕ್ರಿಯಾಶೀಲತೆಗೆ ಇಂತಹ ಕಾರ್ಯಾಗಾರಗಳು ಅಗತ್ಯವಾಗಿವೆ ಎಂದರು.
ಸಹಾಯಕ ಪ್ರಾಧ್ಯಾಪಕರಾದ ಗಣೇಶ್ ಪ್ರಸಾದ್ ಮಾತನಾಡಿ, ಸಾಹಿತ್ಯವನ್ನು ಓದುವುದರ ಮೂಲಕ ನಾವು ಜೀವಂತಿಕೆಯನ್ನು ಉಳಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಕಾಲೇಜಿನ ವಿದ್ಯಾರ್ಥಿ ಹರ್ಷವರ್ಧನ್ ಮಾತನಾಡಿ, ಇಂತಹ ಕಮ್ಮಟಗಳು ಯುವಬರಹಗಾರರಿಗೆ ಉತ್ತಮವಾದ ಕಥೆಗಳನ್ನು ರಚಿಸಲು ಸ್ಪೂರ್ತಿದಾಯಕವಾಗಿದೆ ಎಂದರು.
ಶಿವಮೊಗ್ಗದ ವಿವಿಧ ಕಾಲೇಜುಗಳಿಂದ ಹಲವಾರು ವಿದ್ಯಾರ್ಥಿಗಳು ಮತ್ತು ಯುವ ಬರಹಗಾರರು ಕಮ್ಮಟದಲ್ಲಿ ಭಾಗವಹಿಸಿದ್ದರು. ಸುಮಾರು ಹತ್ತುಆಯ್ದ ಕಥೆಗಳನ್ನು ಚರ್ಚಿಸಲಾಯಿತು.
ವಿಭಾಗದ ಮುಖ್ಯಸ್ಥರಾದ ರೇಷ್ಮಾ ವಂದಿಸಿ, ಕು.ಸಂಧ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post