ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಧೀಜಿಯವರ ಆದರ್ಶ ತತ್ವಗಳು ಇತಿಹಾಸ ಪುಟಗಳಿಗೆ ಸಿಮಿತವಾಗದೇ ನಮ್ಮ ಯುವ ಸಮೂಹ ಅಧ್ಯಯನ ನಡೆಸುವಂತಾಗಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ ಅಭಿಪ್ರಾಯಪಟ್ಟರು
ಇಂದು ನಗರದ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಗಾಂಧೀಜಿಯವರ ಚಿಂತನೆಗಳು ಸದಾ ಪ್ರಸ್ತುತವಾಗಿದ್ದು ಅವರ ಸಂಘಟನಾ ಶಕ್ತಿ , ಅಹಿಂಸಾ ತತ್ವ ನಮ್ಮೆಲ್ಲರಿಗೂ ದಾರಿ ದೀಪವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ತತ್ವ ಆದರ್ಶಗಳ ಪಾಲನೆಯಲ್ಲಿ ರಾಜಿಯಾಗಬೇಕಾದ ಸನ್ನಿವೇಶ ನಿರ್ಮಾಣವಾಗುತ್ತಿರುವುದು ವಿಷಾದನೀಯ. ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ.ಪಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ.ರಜತ್ ಹೆಗಡೆ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಸ್ಪೂರ್ತಿ , ಸ್ಮೀತಾ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post