ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿ ದೇಶದ ಉನ್ನತಿಕರಣಕ್ಕೆ ನಾವೆಲ್ಲರು ಕಂಕಣ ಬದ್ದರಾಗೋಣ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ ಅಭಿಮತ ವ್ಯಕ್ತಪಡಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ನಗರದ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೊಳಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಜಿಲ್ಲೆಯ ಮಹನಿಯರ ಪಾತ್ರ ಮಹತ್ವದಾಗಿದೆ. ಇಂದು ಭಾರತ ಹಲವಾರು ಸಾಧನೆಯ ದಾಪುಗಲನ್ನು ಇಡುತ್ತಿದೆ. ಕೊವಿಡ್ ಆತಂಕದ ಈ ಸಂದರ್ಭದಲ್ಲಿ , ಆರೋಗ್ಯ , ಶಿಕ್ಷಣ , ಮಾನವ ಸಂಪನ್ಮೂಲ ಕ್ಷೇತ್ರಗಳು ಆಧುನಿಕ ತಂತ್ರಜ್ಞಾನಗಳ ಮೂಲಕ ಮತ್ತಷ್ಟು ಉನ್ನತಿಕರಣಗೊಳ್ಳುವಂತಾಗಲಿ. 1947 ರಲ್ಲಿ ರೆಡಿಯೋ ಮೂಲಕ ಭಾರತ ಸ್ವಾತಂತ್ರ್ಯ ಹೊಂದಿದ ವಿಚಾರವನ್ನು ಕೇಳಿ ಸಂಭ್ರಮಿಸಿದ್ದೆವು, ಅಂದಿನಿಂದ ಇಂದಿನವರೆಗೆ ಅಭಿವೃದ್ಧಿ ಹೊಂದುತ್ತಿರುವ ಭಾರತವನ್ನು ನೋಡುತ್ತಾ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಿಸುತ್ತಿದ್ದೆವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಖಜಾಂಚಿಗಳಾದ ಸಿ.ಆರ್.ನಾಗರಾಜ, ನಿರ್ದೇಶಕರಾದ ಡಾ.ಪಿ.ನಾರಾಯಣ, ಎನ್.ಟಿ.ನಾರಾಯಣರಾವ್, ಹೆಚ್.ಸಿ.ಶಿವಕುಮಾರ್, ಅಜೀವ ಸದಸ್ಯರಾದ ಆನಂದ, ಕುಲಸಚಿವರಾದ ಪ್ರೋ. ಹೂವಯ್ಯಗೌಡ, ಜೆ.ಎನ್.ಎನ್.ಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ. ಪಿ, ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ.ರಜತ್ ಹೆಗಡೆ, ಎಂ.ಬಿ.ಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಎಂ.ಸಿ.ಎ ವಿಭಾಗದ ಮುಖ್ಯಸ್ಥರಾದ ಡಾ.ಪ್ರಭುದೇವ, ದಿನಕರ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸೋಮಶೇಖರ್, ಅಡ್ವಾನ್ಸ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಶಿವಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪಿ.ಆರ್.ಓ ಸಿ.ಎಂ.ನೃಪತುಂಗ ನಿರೂಪಿಸಿ , ಲ್ಯಾಬ್ ಇನ್ಸ್ಟ್ರಕ್ಟರ್ ಸುನಿಲ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post