ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ 60ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಸೇರಿ ನಡೆಸುತ್ತಿರುವ ನಮ್ಮ ನಡಿಗೆ ಶಾಂತಿಯ ಕಡೆಗೆ ಕಾರ್ಯಕ್ರಮವನ್ನು ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಎಂದು ತಿಳಿದು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ಶರಾವತಿ ನಗರ ಜೆಸಿಐ ಸಂಸ್ಥಾಪಕ ಅಧ್ಯಕ್ಷ ಜೆಸಿ ಜ್ಯೋತಿ ಅರಳಪ್ಪ ಕರೆ ನೀಡಿದ್ದಾರೆ.
ಕಳೆದ ಆರು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಶಿವಮೊಗ್ಗ ನಗರ ಬಂದ್ ಆಗುತ್ತಿದ್ದು ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ, ಹೊರ ಜಿಲ್ಲೆಗಳಿಂದ ಆರೋಗ್ಯ ಸಮಸ್ಯೆಗೆ ಬರುವ ರೋಗಿಗಳಿಗೆ, ವೃದ್ಧರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರಿಗೂ ತೊಂದರೆ ಆಗುತ್ತಿದೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ, ಸರ್ಕಾರಕ್ಕೂ ನಷ್ಟವಾಗುತ್ತಿದೆ. ಎಲ್ಲಾ ಧರ್ಮದ ಗುರುಗಳು, ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಸಾರ್ವಜನಿಕರು ಸೇರಿ ಎಂಟರಿಂದ ಹತ್ತು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದ್ದು. ನಮ್ಮ ನಡಿಗೆ ಶಾಂತಿಯ ಕಡೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಬನ್ನಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post