ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಭಾರಿಯ ಸರ್ಕಾರದ ಅವಧಿ ಮುಗಿಯುವವರೆಗೂ ಬದಲಾಯಿಸಬಾರದು ಎಂದು ಗ್ರಾಮಾಂತರ ಲಿಂಗಾಯತ ವೀರಶೈವ ಸಮಾಜದ ಅಧ್ಯಕ್ಷ ಡಿ.ಬಿ. ವಿಜಯಕುಮಾರ್ ಒತ್ತಾಯಿಸಿದ್ದಾರೆ.
ಸಮಾಜದ ತುರ್ತು ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವಂತಹ ಹೇಳಿಕೆಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದನ್ನು ತೀಕ್ಷ್ಣವಾಗಿ ಖಂಡಿಸಿರುವ ಅವರು, ಯಡಿಯೂರಪ್ಪ ಅವರ ಬದಲಾವಣೆ ಕುರಿತು ಎದ್ದಿರುವ ವದಂತಿಗಳಿಗೆ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಸಮಾಜದ ಗೌರವಾಧ್ಯಕ್ಷ ಲೋಕೇಶಪ್ಪ ಮಾತನಾಡಿ, ವೀರಶೈವ ಮಠಾಧೀಶರ ಸಹಿತ ರಾಜ್ಯದ ಎಲ್ಲಾ ಧರ್ಮಗುರುಗಳು ಯಡಿಯೂರಪ್ಪ ಪರ ಧ್ವನಿ ಎತ್ತಿರುವುದು ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಅನ್ಯ ಪಕ್ಷದ ನಾಯಕರು ಸಹ ಯಡಿಯೂರಪ್ಪ ಪರ ಮಾತನಾಡುತ್ತಿರುವುದನ್ನು ಬಿಜೆಪಿಯ ಪ್ರಮುಖರು ಗಮನಿಸಿ ಕೂಡಲೇ ವದಂತಿಯ ಮಾತುಗಳಿಗೆ ಇತೀಶ್ರೀ ಹಾಡಬೇಕೆಂದು ಹೇಳಿದ್ದಾರೆ.
ಸಭೆಯಲ್ಲಿ ಸಮಾಜದ ಉಪಾಧ್ಯಕ್ಷರಾದ ಪಿ.ಡಿ.ಮಂಜಪ್ಪ, ರೇವಣ್ಣ, ಕಾರ್ಯದರ್ಶಿ ಮಹೇಶ್, ಖಜಾಂಚಿ ಬಿ.ಟಿ.ಈಶ್ವರಪ್ಪ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post