No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಯುವ ಮುನ್ನ ಸಾರ್ಥಕ ಬದುಕು ನಡೆಸಿ: ನಾಡೋಜ ಡಾ. ಗೊ.ರು. ಚನ್ನಬಸಪ್ಪ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ವಿಚಾರ ಸಂಕಿರಣ ಹಾಗೂ ನೂತನ ದತ್ತಿಗಳ ವಿಶೇಷ ಉಪನ್ಯಾಸ ಮಾಲೆ

kalpa News by kalpa News
October 24, 2022
in ಶಿವಮೊಗ್ಗ
0
ಸಾಯುವ ಮುನ್ನ ಸಾರ್ಥಕ ಬದುಕು ನಡೆಸಿ: ನಾಡೋಜ ಡಾ. ಗೊ.ರು. ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಾವು ಚರ್ಚೆ ಮಾಡಬೇಕಿರುವುದು ಸಾವಿನ ಬಗ್ಗೆ ಅಲ್ಲ. ಜನನ ಹಾಗೂ ಸಾವಿನ ಮಧ್ಯೆ ಬದುಕು ಎಂಬುದಿದೆ. ನಾವೆಲ್ಲರೂ ಜೀವಿತ ಅವಧಿಯಲ್ಲಿ ಉತ್ತಮ ಬದುಕು ಅನುಭವಿಸುವುದು ಕೂಡ ನಮ್ಮ ಕೈಯಲ್ಲೇ ಇದೆ ಎಂದು ನಾಡೋಜ ಡಾ. ಗೊ.ರು.ಚನ್ನಬಸಪ್ಪ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಚಾರ ಸಂಕಿರಣ ಹಾಗೂ ಶ್ರೀಮತಿ ಶಕುಂತಲ ಶ್ರೀ ಎಸ್.ರುದ್ರೇಗೌಡರ ದತ್ತಿ ಕಾರ್ಯಕ್ರಮದಲ್ಲಿ “ಮರಣವೇ ಮಹಾನವಮಿ” ವಿಷಯ ಕುರಿತು ಮಾತನಾಡಿದರು.
ಮಗು ಜನಿಸಿದಾಗ ಸಂತಸಪಡುವುದು, ವ್ಯಕ್ತಿಯೊಬ್ಬ ಸತ್ತಾಗ ಅನುಭವಿಸುವ ಸಂಕಟಕ್ಕೆ ಅರ್ಥವಿಲ್ಲ. ಏಕೆಂದರೆ ಅವೆರಡು ಜನಿಸಿದ ವ್ಯಕ್ತಿ, ಸತ್ತ ವ್ಯಕ್ತಿಗೆ ಅರಿವು ಆಗುವುದಿಲ್ಲ. ಆದರೆ ಸಾಯುವ ಮುನ್ನ ನಾವು ಸಾರ್ಥಕ ಬದುಕು ನಡೆಸುವುದು ಸಾಧ್ಯವಿದೆ. ಅದೇ ನಮ್ಮ ಚಿಂತನೆ ಆಗಬೇಕು. ವಿಶ್ವಾಸದಿಂದ ಜೀವನ ನಡೆಸಿದ ಬದುಕು ನಮ್ಮದಾಗಬೇಕು ಎಂದು ತಿಳಿಸಿದರು.

ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಶರಣ ಸಾಹಿತ್ಯ ಪರಿಷತ್‌ ಮೂರು ದಿನದ ದತ್ತಿ ಉಪನ್ಯಾಸಗಳ ಮೂಲಕ ಜ್ಞಾನದಾಸೋಹ ಕಾರ್ಯ ಮಾಡಿದ್ದು, ಅತ್ಯಂತ ಅಭಿನಂದನೀಯ. ಶರಣ ತತ್ವವನ್ನು ಬದುಕಿನ ಉಸಿರಾಗಿಸಿಕೊಂಡ ಡಾ. ಗೊ.ರು.ಚನ್ನಬಸಪ್ಪ ಅವರ ಉಪನ್ಯಾಸ ಮಾರ್ಗದರ್ಶನವಾಗಿತ್ತು ಎಂದು ಹೇಳಿದರು.
ವಚನ ಸಾಹಿತ್ಯದ ಅಧ್ಯಯನ, ಅನುಸರಣೆ, ಅನುಭಾವದ ಬದುಕು ನಮ್ಮದಾಗಬೇಕು. ಇದೇ ಇಂದಿನ ಬದುಕಿಗೆ ಭರವಸೆ ಒದಗಿಸುತ್ತದೆ. ಪ್ರತಿಯೊಬ್ಬರು ವಚನ ಸಾಹಿತ್ಯದ ಮಹತ್ವ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಮನುಷ್ಯ ಜನಿಸಿದ ನಂತರ ಸಾವು ಕೂಡ ನಿಶ್ಚಿತ. ಸಾವಿನ ನೆರಳಲ್ಲೇ ಬದುಕಿನ ಬೆಳಕನ್ನು ಕಂಡುಕೊಳ್ಳಬೇಕು. ಸಾವಿನ ಭಯಕ್ಕಿಂತ ಬದುಕಿನ ಕ್ಷಣಗಳ ಮಹತ್ವವನ್ನು ಅರಿತು ತೀವ್ರವಾಗಿ ಬದುಕಬೇಕು. ಪ್ರತಿ ಕ್ಷಣವು ಅಮೂಲ್ಯವಾದುದು ಎಂದು ಹೇಳಿದರು.
ಮನುಷ್ಯ ತನಗೆ ದೊರೆತಿರುವ ಆಯುಷ್ಯವನ್ನು ಅರ್ಥಪೂರ್ಣವಾಗಿ ಉಪಯೋಗಿಸಿಕೊಳ್ಳಬೇಕು. ಒರ್ವ ವ್ಯಕ್ತಿಯ ನಿಜವಾದ ಆಯುಷ್ಯ ಅವನು ಎಷ್ಟು ವರ್ಷ ಬದುಕಿದ್ದ ಎನ್ನುವುದಕ್ಕಿಂತ ಆತ ಸತ್ತ ನಂತರವು ಜನರು ಎಷ್ಟು ವರ್ಷ ನೆನಪಿಸಿಕೊಳ್ಳುತ್ತಾರೆ ಎಂಬುದನ್ನು ಅವಲಂಬಿಸುತ್ತದೆ ಎಂದು ತಿಳಿಸಿದರು.

Also read: ವ್ಯಾಘ್ರತನ ಪ್ರದರ್ಶಿಸಿದ ವಿ ಸೋಮಣ್ಣ ತಕ್ಷಣ ರಾಜೀನಾಮೆ ನೀಡಿ: ಆಪ್ ಸುರೇಶ್‌ ರಾಥೋಡ್‌ ಆಗ್ರಹ

ಕೈಗಾರಿಕೋದ್ಯಮಿ ಡಿ.ಎಸ್.ಚಂದ್ರಶೇಖರ್‌ ಮಾತನಾಡಿ, ಕೈಗಾರಿಕಾ ಮತ್ತು ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿರುವ ಎಸ್.ರುದ್ರೇಗೌಡರ ಹೆಸರಿನಲ್ಲಿ ವಿಶೇಷ ದತ್ತಿ ನಿಧಿ ಸ್ಥಾಪಿಸಲಾಯಿತು. ಅವರ ಉತ್ತಮ ವ್ಯಕ್ತಿತ್ವ ಹಾಗೂ ಸಾಧನೆಯ ಹಾದಿ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕವು ಸಂಘಟನಾ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡು ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಹಿಂದೂಸ್ಥಾನಿ ಗಾಯಕ ಹೂಮಯೂನ್‌ ಹರ್ಲಾಪುರ ತಂಡದವರು ವಚನ ಗಾಯನ ನಡೆಸಿಕೊಟ್ಟರು. ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎನ್‌.ಮಹಾರುದ್ರ, ಕುವೆಂಪು ವಿವಿ ಸಿಂಡಿಕೇಟ್‌ ಸದಸ್ಯೆ ಪ್ರೊ. ಕಿರಣ್‌ ದೇಸಾಯಿ, ಶಾಂತಮ್ಮ ಶಿವಣ್ಣಗೌಡರ್, ಚನ್ನಬಸಪ್ಪ ನ್ಯಾಮತಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಘ್ರತನ ಪ್ರದರ್ಶಿಸಿದ ವಿ ಸೋಮಣ್ಣ ತಕ್ಷಣ ರಾಜೀನಾಮೆ ನೀಡಿ: ಆಪ್ ಸುರೇಶ್‌ ರಾಥೋಡ್‌ ಆಗ್ರಹ

Next Post

ಇಂಡಿಯಾ – ಪಾಕಿಸ್ತಾನ ಪಂದ್ಯಾವಳಿ: ಭಾರತ ಗೆಲುವು ಸಾಧಿಸಿದ ಹಿನ್ನಲೆ ಸಂಭ್ರಮಾಚರಣೆ

kalpa News

kalpa News

Next Post
ಇಂಡಿಯಾ – ಪಾಕಿಸ್ತಾನ ಪಂದ್ಯಾವಳಿ: ಭಾರತ ಗೆಲುವು ಸಾಧಿಸಿದ ಹಿನ್ನಲೆ ಸಂಭ್ರಮಾಚರಣೆ

ಇಂಡಿಯಾ - ಪಾಕಿಸ್ತಾನ ಪಂದ್ಯಾವಳಿ: ಭಾರತ ಗೆಲುವು ಸಾಧಿಸಿದ ಹಿನ್ನಲೆ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL