No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ಸೆ.30ರಂದು ಲೋಕ ಅದಾಲತ್…

kalpa News by kalpa News
September 16, 2021
in ಶಿವಮೊಗ್ಗ
0
ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಮುಂತಾದ ವಿಷಯಗಳ ಪ್ರಕರಣಗಳನ್ನು ಗುರುತಿಸಿ, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟಂಂಬರ್ 30ರಂದು ಮಧ್ಯಾಹ್ನ 1ರಿಂದ ನಡೆಯಲಿರುವ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಾಫ ಹುಸೇನ್ ಎಸ್.ಎ. ಅವರು ಹೇಳಿದರು.


ಅವರು ಇಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಅದಾಲತ್‌ನಲ್ಲಿ ಉಭಯ ಕಕ್ಷಿದಾರರ ಒಪ್ಪಿಗೆಯ ಮೇರೆಗೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಈ ಅದಾಲತ್‌ನಿಂದಾಗಿ ಕೊರೋನದಂತಹ ಸಾಂಕ್ರಾಮಿಕದ ಕಾರಣದಿಂದಾಗಿ ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಅನೇಕ ಪ್ರಕರಣಗಳ ಇತ್ಯರ್ಥಕ್ಕೆ ವೇಗ ಹೆಚ್ಚಲಿದೆ ಎಂದ ಅವರು, ಅನೇಕ ಕುಟುಂಬಗಳಲ್ಲಿನ ಆಸ್ತಿ ಹಂಚಿಕೆ ಸಂಬಂಧ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳಿಂದಾಗಿ ಕೌಟುಂಬಿಕ ಸಂಬಂಧಗಳು ಹಾಳಾಗಿವೆ. ಇಂತಹ ಪ್ರಕರಣಗಳನ್ನು ಗುರುತಿಸಿ, ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಿ ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಇಂತಹ ಸುಮಾರು 45 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು ಎಂದರು.


ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳಲ್ಲಿ ದಾಖಲಾಗುತ್ತಿರುವ ಚೆಕ್‌ಬೌನ್ಸ್ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡ ರಚಿಸಿ, ಪ್ರಕರಣ ದಾಖಲಾಗುವ ಪೂರ್ವದಲ್ಲಿಯೇ ಇತ್ಯರ್ಥಗೊಳಿಸುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ವ್ಯಾವಹಾರಿಕವಾದ ತುರ್ತು ಅಗತ್ಯಗಳಿಗೆ, ತಾತ್ಕಾಲಿಕ ಹೊಂದಾಣಿಕೆಗಾಗಿ ನೀಡಲಾಗುವ ಚೆಕ್‌ನಿಂದ ಸಮಸ್ಯೆಗಳಿಗೆ ಸಿಲುಕಿ, ಅನೇಕ ವರ್ಷಗಳ ಕಾಲ ಅನಗತ್ಯವಾಗಿ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿ, ಅರ್ಹರಿಗೆ ನ್ಯಾಯ ಒದಗಿಸಲು ಈ ಅದಾಲತ್ ಸಹಕಾರಿಯಾಗಲಿದೆ ಎಂದರು.

ಕಳೆದ ಆಗಸ್ಟ್ 14ರಂದು ಜಿಲ್ಲೆಯಾಧ್ಯಂತ ಹಮ್ಮಿಕೊಳ್ಳಲಾಗಿದ್ದ ಬೃಹತ್ ಲೋಕಅದಾಲತ್‌ನಿಂದಾಗಿ ಗುರುತಿಸಲಾಗಿದ್ದ 8,635ಪ್ರಕರಣಗಳ ಪೈಕಿ 15,013ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪ್ರಸ್ತುತ ಅವಧಿಯಲ್ಲಿಯೂ ನಿರೀಕ್ಷೆಗೆ ಮೀರಿದ ಸಾಧನೆ ಮಾಡುವ ಸಂಕಲ್ಪ ಮಾಡಲಾಗಿದ್ದು, ನ್ಯಾಯವಾದಿಗಳು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.


ದೇಶದಾದ್ಯಂತ ಏರ್ಪಡಿಸುವ ಲೋಕಅದಾಲತ್‌ನಿಂದಾಗಿ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳುತ್ತಿವೆ. ವಿಶೇಷವಾಗಿ ರಾಜ್ಯದಲ್ಲಿ ಪ್ರತಿಬಾರಿ ನಡೆಯುವ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ದೇಶದಲ್ಲಿಯೇ ಮೊದಲ ಪಂಕ್ತಿಯಲ್ಲಿದೆ, ಇದರಿಂದಾಗಿ ರಾಜ್ಯದ ನ್ಯಾಯಾಲಯಗಳು ಪ್ರಶಂಸೆಗೆ ಒಳಗಾಗಿವೆ ಎಂದರು.

ಜಿಲ್ಲೆಯಲ್ಲಿ ಫೋಕ್ಸೋ ಕಾಯ್ದೆಯಡಿ 300ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಒಂದು ವರ್ಷದ ಕಾಲಾವಧಿಯಲ್ಲಿ ಇತ್ಯರ್ಥಗೊಳಿಸಲು ಪ್ರತ್ಯೇಕವಾದ ನ್ಯಾಯಾಧೀಶರನ್ನು ನೇಮಿಸಲಾಗಿದೆ. ಅಲ್ಲದೇ ಹೆಚ್ಚುವರಿಯಾಗಿ ನ್ಯಾಯಾಧೀಶರನ್ನು ನೇಮಿಸಲು ಉಚ್ಛ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇದ್ರಪ್ಪ ಅವರು ಮಾತನಾಡಿ, ಜನಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದ ಅವರು, ಲೋಕ ಅದಾಲತ್ ಮಾತ್ರವಲ್ಲದೇ ಮಧ್ಯಸ್ಥಿಕಾ ಕೇಂದ್ರಗಳ ಮೂಲಕವೂ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ಕೌಟುಂಬಿಕ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ವಕೀಲರುಗಳು ಸಹಕರಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಇದರಿಂದಾಗಿ ಸಂಪಾದನೆಯೊಂದೆ ಪ್ರಧಾನವಲ್ಲ ಎಂಬುದು ಸಾಬೀತಾಗಿದೆ ಎಂದರು.

ನ್ಯಾಯಾಲಯಗಳಲ್ಲಿ ದಾಖಲಾಗುತ್ತಿರುವ ಪ್ರಕರಣಗಳಿಗೆ ಜನಸಂಖ್ಯೆಯ ಏರಿಕೆಯೂ ಪ್ರಮುಖ ಕಾರಣವಾಗಿದೆ. ದಾಂಪತ್ಯ ಕಲಹ, ವೈವಾಹಿಕ ಸಂಬಂಧಗಳಿಗೆ ಸಂಬಂಧಪಟ್ಟಂತ ಪ್ರಕರಣಗಳನ್ನು ವ್ಯಾಜ್ಯದಾಖಲಿಸುವ ಪೂರ್ವದಲ್ಲಿಯೇ ಇತ್ಯರ್ಥಗೊಳಿಸಲು ವಕೀಲರುಗಳು ಉತ್ಸುಕರಾಗಿದ್ದಾರೆ. ಇದರಿಂದಾಗಿ ಕೌಟುಂಬಿಕ ಸಾಮರಸ್ಯ ಉಂಟಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಪೂರ್ಣಿಮಾ ಕೆ.ಯಾದವ್ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLok AdalathMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಲೋಕ ಅದಾಲತ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಮಾಜಿ ಸೈನಿಕರ ಸಂಘದಿಂದ ವಿಶ್ವೇಶ್ವರಯ್ಯನವರ ಜನ್ಮದಿನ ಆಚರಣೆ…

Next Post

ಸೆ.21ರಂದು ಭದ್ರಾವತಿಯ ಗೋಣಿಬೀಡಿನಲ್ಲಿ ಮಾಜಿ ಶಾಸಕ ಅಪ್ಪಾಜಿ ಗೌಡರ ಪುಣ್ಯಸ್ಮರಣೆ

kalpa News

kalpa News

Next Post
ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ

ಸೆ.21ರಂದು ಭದ್ರಾವತಿಯ ಗೋಣಿಬೀಡಿನಲ್ಲಿ ಮಾಜಿ ಶಾಸಕ ಅಪ್ಪಾಜಿ ಗೌಡರ ಪುಣ್ಯಸ್ಮರಣೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL