ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಬ್ಬ ಗಂಡನಾಗಿ ನನ್ನ ಹೆಂಡತಿಯು ಶಾಸಕಿ ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ ಎಂದು ನಟ ಶಿವರಾಜ್ ಕುಮಾರ್ Shiva Rajkumar ತಮ್ಮ ಆಶಯವನ್ನು ಹಾಕಿದರು.
ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿ, ಗೀತಾ ಶಿವರಾಜಕುಮಾರ್ Geetha Shiva Rajkumar ಈಗಾಗ್ಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಪೂರ್ತಿ ದೊರೆಯಲಿದೆ ಇದಕ್ಕಾಗಿ ಜನಪ್ರತಿನಿಧಿ ಆಗಬೇಕು ಎಂಬ ಆಶಯ ಇದೆ ಎಂದರು.
ಗೀತಾ ಶಿವರಾಜಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ ರಾಜಕೀಯ ಕುಟುಂಬದಿಂದ ಆಕೆ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ ಎಂದರು.
Also read: ರಾಜಕೀಯಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್? ಸ್ವತಃ ಅವರೇ ಹೇಳಿದ್ಧೇನು?
ನಾವು ಯಾವುದಕ್ಕೂ ಸಿದ್ಧ ಇದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ನಾನು ಬರುತ್ತೇನೆ. ಸಿನಿಮಾ ಚಿತ್ರೀಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post