No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲೋಕಸಭಾ ಚುನಾವಣೆ | ಸಿಟಿ ಸೆಂಟರ್ ಮಾಲ್’ನಲ್ಲಿ ಗಮನ ಸೆಳೆಯುತ್ತಿದೆ ಚುನಾವಣೆ ಮಾಡೆಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2024
in ಶಿವಮೊಗ್ಗ
0
ಲೋಕಸಭಾ ಚುನಾವಣೆ | ಸಿಟಿ ಸೆಂಟರ್ ಮಾಲ್’ನಲ್ಲಿ ಗಮನ ಸೆಳೆಯುತ್ತಿದೆ ಚುನಾವಣೆ ಮಾಡೆಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ #Lok Sabha Election ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ #Snehal Sudhakr Lokhande ಅವರು ಮನವಿ ಮಾಡಿದರು.

ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್‍ನಲ್ಲಿ ಏ.28 ರ ಸಂಜೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಮಾಲ್‍ನಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಮಾಡೆಲ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇದೆ. ಮತದಾನ ಪ್ರಮಾಣ ಹೆಚ್ಚಬೇಕು. ಬೆಂಗಳೂರಿನಲ್ಲಿ ಶೇಕಡ 50ಕ್ಕಿಂತ ಕಡಿಮೆ ಮತದಾನ ನಡೆದಿದ್ದು ಆ ರೀತಿ ನಮ್ಮ ಶಿವಮೊಗ್ಗದಲ್ಲಿ ಆಗಬಾರದು. ಮತ ಚಲಾಯಿಸುವ ಮುಖಾಂತರ ದೇಶದ ಅಭಿವೃದ್ಧಿಯಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇಕಡ 76 ರಷ್ಟು ಮತದಾನ ನಡೆಡಿದ್ದು, ನಗರ ಪ್ರದೇಶದಲ್ಲಿ ಶೇಕಡಾ 60 ರಷ್ಟು ಮಾತ್ರ ಮತದಾನ ನಡೆದಿದೆ. ನಗರ ಪ್ರದೇಶದ ಜನರು ಮತದಾನ ಮಾಡುವಲ್ಲಿ ಆಸಕ್ತಿ ಕಡಿಮೆ ತೋರುತ್ತಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಜನರ ಜೀವನ ರೂಪಿಸುವುದಕ್ಕೆ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದ್ದು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು.
ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಮಾತನಾಡಿ ಮೇ 7 ಕ್ಕೆ ಬೆಳಗ್ಗೆ 7 ಗಂಟೆ ಯಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದು. ವಯೋವೃದ್ಧರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಹಾಕುವ ಅವಕಾಶ ಈ ಬಾರಿ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮಗಳು ಕಂಡುಬಂದಲ್ಲಿ ತಮ್ಮ ಮೊಬೈಲ್‍ನಲ್ಲಿ ಸಿವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಆ ಮೂಲಕ ದೂರು ಸಲ್ಲಿಸಬಹುದು ಮತ್ತು 1950 ಗೆ ಕರೆ ಮಾಡಿ ಸಹ ದೂರು ನೀಡಬಹುದು ಎಂದರು.

Also read: ನಿಮ್ಮ ಮಕ್ಕಳ ಪರಿಪೂರ್ಣ ಭವಿಷ್ಯಕ್ಕೆ ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ನಿಮ್ಮ ಆಯ್ಕೆಯಾಗಲಿ

ಸ್ವೀಪ್ ಐಕಾನ್ ನಿವೇದನ್ ನೆಂಪೆ ಮಾತನಾಡಿ, ಶಿವಮೊಗ್ಗದ ಜನರು ಪ್ರಜ್ಞಾವಂತರೆಂದು ತೋರಿಸಿಕೊಳ್ಳಲು ಒಳ್ಳೆಯ ಅವಕಾಶ ದೊರಕಿದೆ. ಬುದ್ಧಿವಂತರು ಮತದಾನ ಮಾಡುವ ಮೂಲಕ ಪ್ರಜ್ಞಾವಂತರಾಗುತ್ತಾರೆ ಎಂದ ಅವರು ಮೇ 7ಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಕೋರಿದರು.

ಕಲಾವಿದರಾದ ಸತೀಶ ಪುರಪ್ಪೆಮನೆ ಹಾಗೂ ತಂಡದವರು ಚುನಾವಣಾ ಮಾಡೆಲ್ ನ್ನು ಸಿದ್ದಪಡಿಸಿದ್ದು ಸಿಟಿ ಸೆಂಟರ್ ಮಾಲ್‍ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆಯ ಅಧಿಕಾರಿ ಸುಪ್ರಿಯ, ಸಿಟಿ ಸೆಂಟರ್ ಮಾಲ್ ನ ದರ್ಶನ್, ಪಾಲಿಕೆ ಮತ್ತು ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaShimogaShivamogga NewsSnehal Sudhakr Lokhandeಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ನೇಹಲ್ ಸುಧಾಕರ್ ಲೋಖಂಡೆ
Share198Tweet123Send
Previous Post

ನಿಮ್ಮ ಮಕ್ಕಳ ಪರಿಪೂರ್ಣ ಭವಿಷ್ಯಕ್ಕೆ ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ನಿಮ್ಮ ಆಯ್ಕೆಯಾಗಲಿ

Next Post

ಕಾಟಚಾರಕ್ಕೆ ಎಂಪಿ ಆದರೆ ಸಾಲದು, ಕೆಲಸ ಮಾಡಬೇಕು: ಹ್ಯಾಟ್ರಿಕ್ ಹೀರೋ ಶಿವಣ್ಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಟಚಾರಕ್ಕೆ ಎಂಪಿ ಆದರೆ ಸಾಲದು, ಕೆಲಸ ಮಾಡಬೇಕು: ಹ್ಯಾಟ್ರಿಕ್ ಹೀರೋ ಶಿವಣ್ಣ

ಕಾಟಚಾರಕ್ಕೆ ಎಂಪಿ ಆದರೆ ಸಾಲದು, ಕೆಲಸ ಮಾಡಬೇಕು: ಹ್ಯಾಟ್ರಿಕ್ ಹೀರೋ ಶಿವಣ್ಣ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL