ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2024ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ Geetha Shivarajkumar ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಕರ್ನಾಟಕದ ಆರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಯಾವುದೇ ಕ್ಷಣದಲ್ಲೂ ಪ್ರಕಟಗೊಳ್ಳಲಿದ್ದು, ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಗೀತಾಶಿವರಾಜಕುಮಾರ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೇಸ್ ನಿರ್ಧರಿಸಿದೆ ಎನ್ನಲಾಗಿದೆ.

ಬಿಜೆಪಿಯಲ್ಲಿದ್ದು ಸದ್ಯ ತಟಸ್ಥರಾಗಿರುವ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ ಗೆ ಕರೆತಂದು ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕಾಂಗ್ರೆಸ್ ನಾಯಕರ ಪ್ರಯತ್ನ ವಿಫಲವಾಗಿದ್ದು, ಕುಮಾರ್ ಬಂಗಾರಪ್ಪ ಅವರ ಕಾಂಗ್ರೆಸ್ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸಿದ್ದ ಸಹೋದರ ಸಚಿವ ಮಧುಬಂಗಾರಪ್ಪ ತಮ್ಮ ಸಹೋದರಿಗೆ ಪಕ್ಷದ ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ದ 2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲನುಭವಿಸಿದ್ದ ಗೀತಾಶಿವರಾಜಕುಮಾರ್ ಈ ಬಾರಿ ಹಾಲಿ ಸಂಸದ ಬಿ ವೈ ರಾಘವೇಂದ್ರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















