ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #Lok Sabha Election ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ #Punam ಅವರು ತಿಳಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್‍ಪೋಸ್ಟ್‍ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ/ತಪಾಸಣೆ ಕೈಗೊಳ್ಳಬೇಕು.

Also read: ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು
ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‍ಓಪಿ ಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‍ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.

ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಜಾಗರೂಕತೆಯಿಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‍ಪೋಸ್ಟ್‍ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post