ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಲೋಕಸಭಾ #Lok Sabha Election ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಹಾಗೂ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, #Geetha Shivarajkumar ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, #K.S. Eshwarappa ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್. ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ, ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದ್ದು, ಬಿ.ವೈ. ರಾಘವೇಂದ್ರ ಸೇರಿದಂತೆ ಒಟ್ಟು 27 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post