ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಎಂಟು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಇಬ್ಬರು ಇಂಜಿನಿಯರ್‌ಗಳ ಮನೆ, ಕಚೇರಿ ಮತ್ತು ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಅವರ ಮನೆ, ತೋಟದ ಮನೆ, ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಅವರಿಗೆ ಸಂಬಂಧಿಸಿದ ಒಟ್ಟು ಐದು ಕಡೆ ಪರಿಶೀಲನೆ ನಡೆಯುತ್ತಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಮೂರನೆ ಮುಖ್ಯರಸ್ತೆಯ ಕೆ.ಹೆಚ್‍ಬಿ ಕಾಲೋನಿ ಮನೆ, ಭದ್ರಾವತಿ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಮನೆಯಲ್ಲಿ ಶೋಧಕಾರ್ಯ ನಡೆಯುತ್ತಿದ್ದು, ಶರಾವತಿ ನಗರದಲ್ಲಿರುವ ಪ್ರಶಾಂತ್ ಅವರ ಪತ್ನಿಯ ಸಹೋದರ ನಾಗೇಶ್ ಎಂಬುವವರ ಮನೆಯ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಲ್ಲದೆ ಜಿಲ್ಲಾ ಪಂಚಾಯಿತಿ ಜ್ಯೂನಿಯರ್ ಇಂಜಿನಿಯರ್ ಶಂಕರ್ ನಾಯ್ಕ ಅವರ ಮನೆಯ ಮೇಲೂ ದಾಳಿ ನಡೆಸಿದ್ದು, ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ತಪಾಸಣೆ ನಡೆಸಲಾಗಿದೆ. ಲೋಕಾಯುಕ್ತ ಚಿತ್ರದುರ್ಗ ಎಸ್‍ಪಿ ವಾಸುದೇವ ರಾಮ್ ಅವರ ನೇತೃತ್ವದಲ್ಲಿ ಈ ದಾಳಿನಡೆದಿದ್ದು, ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‍ಪಿ ಉಮೇಶ್ ಈಶ್ವರ್ ನಾಯ್ಕ್ ಲೋಕಾಯುಕ್ತ ಇನ್ಸ್ಪೆಕ್ಟರ್ ಮೃತ್ಯುಂಜಯ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post