ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಕೆ. ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು.
ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ನಡೆದ ಭರ್ಜರಿ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕರಾದ ಕೆ.ಎಸ್. ಈಶ್ವರಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತಿರಿದ್ದರು.
Discussion about this post