ಕಲ್ಪ ಮೀಡಿಯಾ ಹೌಸ್ | |
ಕುಂಸಿ ಬಳಿಯ ಚೋರಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಿನ್ನೆ ಪ್ರೇಮಿಗಳಿಬ್ಬರು ವಿಷ ಸೇವಿಸಿದ್ದ ಪ್ರಕರಣದಲ್ಲಿ ಪ್ರಿಯಕರ ಇಂದು ಸಾವನ್ನಪ್ಪಿದ್ದಾನೆ.
ಚೋರಡಿಯ ಯುವಕ ಹಾಗೂ ರಾಮನಗರದ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರಿಗೆ ಹೆದರಿಕೊಂಡು ನಿನ್ನೆ ಚೋರಡಿ ಬಳಿಯ ಅರಣ್ಯ ಪ್ರದೇಶದಲ್ಲಿ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೇ ಯುವಕ ಇಂದು ಕೊನೆಯುಸಿರೆಳೆದಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post