No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎರಡನೇ ಬಾರಿ ಸಚಿವರಾಗಿ ಮಧು ಶಿವಮೊಗ್ಗದಲ್ಲಿ ಮೊದಲ ಮಹತ್ವದ ಸಭೆ | ಏನೆಲ್ಲಾ ಸೂಚನೆ ಕೊಟ್ರು?

kalpa News by kalpa News
August 9, 2026
in ಶಿವಮೊಗ್ಗ
0
Shivamogga Madhu Bangarappa High Voltage IMP Meeting
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಒದಗಿಸುವುದರ ಜೊತೆಗೆ, ಯೋಜನೆಯ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ವ್ಯಾಪಕ ಅರಿವು ಮೂಡಿಸಬೇಕು ಎಂದು (Shivamogga) ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ (Madhu Bangarappa) ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್. ಅವರಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ತಾಲೂಕುಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಬಿ-ಜಿ ರಾಮ್ ಜಿ ಯೋಜನೆಗೆ ಹೆಚ್ಚಿನ ಒತ್ತು

ಬರ ಪರಿಸ್ಥಿತಿಯಿಂದ ಗ್ರಾಮೀಣ ಜನರು ಸಂಕಷ್ಟಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಯೋಜನೆಯ ಕುರಿತು ಗ್ರಾಮ ಸಭೆಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಹಾಗೂ ಕರಪತ್ರಗಳ ವಿತರಣೆ ಸೇರಿದಂತೆ ವಿವಿಧ ರೀತಿಯಲ್ಲಿ ಜನರಲ್ಲಿ ಅರಿವು ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಎನ್. ಅವರು ಮಾತನಾಡಿ, ಜಿಲ್ಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯು ಜುಲೈ 1ರಿಂದ ಜಾರಿಯಲ್ಲಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕಡ್ಡಾಯವಾಗಿ ಕನಿಷ್ಠ ಒಂದು ಪ್ರಮುಖ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸೂಚಿಸಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಯೋಜನೆಯಡಿ ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ ಮೊದಲ ಐದು ಜಿಲ್ಲೆಗಳ ಪೈಕಿ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಗುಡ್ಡ ಕುಸಿತ ತಡೆಗೆ 82 ಕಾಮಗಾರಿಗಳು

ಮಳೆಗಾಲದಲ್ಲಿ ಮಲೆನಾಡು ಭಾಗದಲ್ಲಿ ಸಂಭವಿಸಬಹುದಾದ ಗುಡ್ಡ ಕುಸಿತವನ್ನು ತಡೆಯುವ ಉದ್ದೇಶದಿಂದ ಒಟ್ಟು 82 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಪಂಚಾಯತ್ ರಾಜ್ ಎಂಜಿನಿಯರಿಂಗ್ ಹಾಗೂ ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ.

ಮಳೆಗಾಲದ ಹಿನ್ನೆಲೆಯಲ್ಲಿ ಕೆಲವು ಕಾಮಗಾರಿಗಳು ವಿಳಂಬವಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಪರಿಶೀಲಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ತುಂಗಾ ಜಲಾಶಯ ಶೇ.100 ಭರ್ತಿ; ಭದ್ರಾ ಶೇ.50

ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟದ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರಸ್ತುತ ತುಂಗಾ ಜಲಾಶಯ ಶೇ.100ರಷ್ಟು ಭರ್ತಿಯಾಗಿದ್ದು, ಭದ್ರಾ ಜಲಾಶಯದಲ್ಲಿ ಶೇ.50ರಷ್ಟು ನೀರು ಸಂಗ್ರಹವಾಗಿದೆ. ಅಂಜನಾಪುರ ಮತ್ತು ಅಂಬ್ಲಿಗೊಳ ಜಲಾಶಯಗಳ ನೀರಿನ ಮಟ್ಟ ಶೇ.45ರಿಂದ 50ರಷ್ಟಿದೆ.

ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ 170 ಅಡಿಗೆ ತಲುಪಿದರೆ ಮಾತ್ರ ಒಂದು ಬೆಳೆಗೆ ನೀರು ಒದಗಿಸಲು ಸಾಧ್ಯವಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಈ ಬಾರಿ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ ಎಂಬ ಮಾಹಿತಿಯನ್ನು ರೈತರಿಗೆ ಈಗಾಗಲೇ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.

Also read>> ಬೆಂಗಳೂರು ನಿಲ್ದಾಣದ ಯಾರ್ಡ್ ಮರುವಿನ್ಯಾಸ | ಏನೆಲ್ಲಾ ಅತ್ಯಾಧುನಿಕ ಬದಲಾವಣೆಯಾಗಿದೆ?

ತುಂಗಾ ನದಿಯಿಂದ ಭದ್ರಾಕ್ಕೆ ನೀರು ಲಿಫ್ಟ್ ಮಾಡುವ ಪ್ರಸ್ತಾವನೆ

ಬರ ಪರಿಸ್ಥಿತಿಯಲ್ಲಿ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರನ್ನು ಎತ್ತಿ ಹರಿಸುವ (ಲಿಫ್ಟ್) ಪ್ರಸ್ತಾವನೆಯ ಕುರಿತು ಚರ್ಚೆ ನಡೆಯಿತು.

ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರು ಈ ಕುರಿತು ಸಚಿವರ ಗಮನ ಸೆಳೆದರು. ತುಂಗಾದಿಂದ ಭದ್ರಾಕ್ಕೆ ನೀರನ್ನು ಲಿಫ್ಟ್ ಮಾಡಿದರೆ ರೈತರಿಗೆ ಬೆಳೆ ಬೆಳೆಯಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.Kumadvathi College Shikariura

ಅಪ್ಪರ್ ತುಂಗಾ ಕಾಲುವೆ ಮೂಲಕ ಕೆರೆಗಳಿಗೆ ನೀರು

ಅಪ್ಪರ್ ತುಂಗಾದಿಂದ ಕಾಲುವೆಗಳು ಹಾಗೂ ಕೆರೆಗಳನ್ನು ತುಂಬಿಸಲು ನೀರು ಬಿಡಲಾಗಿದೆ. ತಾಲೂಕಿನಲ್ಲಿ ಎರಡು ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು, ಹೊಸಹಳ್ಳಿ ಭಾಗದಲ್ಲಿ 23 ಕೆರೆಗಳು ಈಗಾಗಲೇ ಭರ್ತಿಯಾಗಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ. ಆದ್ದರಿಂದ ಕಾಲುವೆಗಳನ್ನು ಸ್ವಚ್ಛಗೊಳಿಸಿ ಹೂಳು ತೆಗೆಸಬೇಕು. ಏತ ನೀರಾವರಿ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಪೈಪ್‌ಲೈನ್ ಮೂಲಕ ನೀರು ಪೂರೈಸುವ ಯೋಜನೆಗೆ ಅಗತ್ಯ ನೀಲನಕ್ಷೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಏತ ನೀರಾವರಿ ಘಟಕಗಳ ದುರಸ್ತಿಗೆ ಸೂಚನೆ

ಉಬ್ರಾಣಿ ಹಾಗೂ ಸಾಸ್ವೆಹಳ್ಳಿ ಏತ ನೀರಾವರಿ ಘಟಕಗಳಲ್ಲಿ ಡಿಸೆಂಬರ್‌ವರೆಗೆ ನೀರು ಹರಿಸಲು ಅವಕಾಶವಿದ್ದರೂ ವಿದ್ಯುತ್ ಹಾಗೂ ಮೋಟಾರ್ ಸಮಸ್ಯೆಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಸಭೆಯ ಗಮನಕ್ಕೆ ತಂದರು.

ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಘಟಕಗಳಲ್ಲಿನ ವಿದ್ಯುತ್ ಮತ್ತು ಮೋಟಾರ್ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ ರೈತರಿಗೆ ನೀರು ಹರಿಸುವಂತೆ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅನಧಿಕೃತ ಪಂಪ್‌ಸೆಟ್ ತೆರವಿಗೆ ಕ್ರಮ

ಜಿಲ್ಲೆಯಲ್ಲಿ ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ನೀರನ್ನು ಸಂರಕ್ಷಿಸುವುದು ಅತ್ಯಂತ ಅಗತ್ಯವಾಗಿದೆ. ಭಾಗಶಃ ತುಂಬಿರುವ ಕೆರೆಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಹಕಾರದೊಂದಿಗೆ ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಪಡೆದು ಅನಧಿಕೃತ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಶೇ.32ರಷ್ಟು ಮಳೆ ಕೊರತೆ

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಜೂನ್‌ನಿಂದ ಇದುವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.32ರಷ್ಟು ಮಳೆ ಕೊರತೆಯಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಭತ್ತದ ವಾಡಿಕೆ ಬಿತ್ತನೆ ವ್ಯಾಪ್ತಿ ಶೇ.58ರಷ್ಟಿದ್ದು, ಈವರೆಗೆ ಶೇ.47ರಷ್ಟು ಬಿತ್ತನೆಯಾಗಿದೆ. ಮೆಕ್ಕೆಜೋಳದ ಬಿತ್ತನೆ ಶೇ.40ರಷ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಶೇ.69ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಆಗಸ್ಟ್ ಅಂತ್ಯದವರೆಗೆ ನಾಟಿ ಮಾಡಲು ಅವಕಾಶವಿದೆ ಎಂದು ತಿಳಿಸಿದರು.

ಬೆಳೆಗಳ ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ ಸಾಕಷ್ಟು ಪ್ರಮಾಣದಲ್ಲಿದೆ. ರಸಗೊಬ್ಬರದ ದಾಸ್ತಾನು ಕೂಡ ಅಗತ್ಯ ಪ್ರಮಾಣದಲ್ಲಿದ್ದು, ‘ಬಗರ್ ಹುಕುಂ’ ಜಮೀನುಗಳಿಗೂ ರಸಗೊಬ್ಬರ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ 60 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಯಾವುದೇ ಮೇವು ಅಭಾವವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬೆಳೆ ಹಾನಿಗೆ ಪರಿಹಾರ; ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಪ್ರಸ್ತಾವನೆ

ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಭಾಗಶಃ ಹಾಗೂ ಪೂರ್ಣ ಪ್ರಮಾಣದ ಪರಿಹಾರ ವಿತರಿಸಲಾಗಿದೆ.

ಗ್ರಾಮಾಂತರ ಪ್ರದೇಶಗಳಲ್ಲಿ ಬಿರುಗಾಳಿಯಿಂದ ಅಡಿಕೆ ಬೆಳೆ ಹಾನಿಗೊಳಗಾದ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗಿತ್ತು. ಇದೀಗ ಶಾಸಕರೊಂದಿಗೆ ನೂತನ ಮುಖ್ಯಮಂತ್ರಿಗಳ ಬಳಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿ ಅಡಿಕೆ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭೂಕುಸಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ

ತೀರ್ಥಹಳ್ಳಿಯಲ್ಲಿ ಸಂಭವಿಸಿದ ಭೂಕುಸಿತದಿಂದ ಮೃತಪಟ್ಟ ಕೊಪ್ಪಳ ಮೂಲದ ಒಂದೇ ಕುಟುಂಬದ ಮೂವರು ಸದಸ್ಯರಿಗೆ ಹಾಗೂ ಹೊಸನಗರದಲ್ಲಿ ಮೃತಪಟ್ಟ ಒಬ್ಬರಿಗೆ ತಲಾ ರೂ.5 ಲಕ್ಷ ಪರಿಹಾರದ ಚೆಕ್ ಈಗಾಗಲೇ ವಿತರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಮನೆ ಹಾನಿಗೆ ಪರಿಹಾರ

ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಎಂಟು ಅಧಿಕೃತ ಮನೆಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗಿದೆ.

ಅನಧಿಕೃತ ಮನೆಗಳಲ್ಲಿ ವಾಸಿಸುತ್ತಿದ್ದ ಸಂತ್ರಸ್ತರು ಪ್ರಸ್ತುತ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಅನಧಿಕೃತ ಮನೆಗಳಿಗೆ ಪರಿಹಾರ ನೀಡುವ ಕುರಿತು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

31 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 31 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ.

ಆನವಟ್ಟಿ ಮತ್ತು ಶಿರಾಳಕೊಪ್ಪ ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇದೆ. ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹುಣಸೂರು ಗ್ರಾಮಕ್ಕೆ ವೈಯಕ್ತಿಕ ಭೇಟಿ ನೀಡಿ ಪರಿಶೀಲನೆ

ಹುಣಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಕುರಿತು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ಸಚಿವರ ಗಮನಕ್ಕೆ ತಂದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಅವರು ವೈಯಕ್ತಿಕವಾಗಿ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.PES Shivamogga

ಬಹುಗ್ರಾಮ ಕುಡಿಯುವ ನೀರು ಯೋಜನೆ ತ್ವರಿತಗೊಳಿಸಲು ಸೂಚನೆ

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವೂ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೀನುಗಾರಿಕೆಗೆ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಮನವಿ

ಮಳೆ ಕೊರತೆಯಿಂದ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಮೀನು ಸಾಕಾಣಿಕೆಗೂ ತೊಂದರೆಯಾಗಿದೆ. ಮೀನು ಸಾಕಾಣಿಕೆಯನ್ನು ಅವಲಂಬಿಸಿರುವ ಕುಟುಂಬಗಳ ಜೀವನೋಪಾಯಕ್ಕೂ ಇದರಿಂದ ಸಮಸ್ಯೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರು ಸಭೆಯಲ್ಲಿ ತಿಳಿಸಿದರು.

ಹಿಂದೆ ಸರ್ಕಾರವೇ ಮೀನು ಮರಿಗಳನ್ನು ಖರೀದಿಸುತ್ತಿತ್ತು. ಆದರೆ ಪ್ರಸ್ತುತ ಬಜೆಟ್‌ನಲ್ಲಿ ಮೀನು ಮರಿ ಖರೀದಿಗೆ ಹಣ ಮೀಸಲಿಟ್ಟಿಲ್ಲ. ಆದ್ದರಿಂದ ಈ ಉದ್ದೇಶಕ್ಕೆ ಅನುದಾನ ಮೀಸಲಿಡುವಂತೆ ಅವರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

20 ಹೊಸ ಮಳೆ ಮಾಪನ ಕೇಂದ್ರಗಳ ಸ್ಥಾಪನೆ

ಜಿಲ್ಲೆಯಲ್ಲಿ 20 ಹೊಸ ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳನ್ನು ವೈಜ್ಞಾನಿಕ ಹಾಗೂ ಸಮರ್ಪಕ ರೀತಿಯಲ್ಲಿ ಸ್ಥಾಪಿಸಿ ನಿಖರವಾದ ಮಳೆ ಪ್ರಮಾಣದ ದತ್ತಾಂಶ ಪಡೆಯಬೇಕು ಎಂದು ಸಚಿವರು ಸೂಚಿಸಿದರು.

ಮಳೆ ಮಾಪನ ಕೇಂದ್ರಗಳು ಸೂಕ್ತ ಸ್ಥಳದಲ್ಲಿ ವೈಜ್ಞಾನಿಕವಾಗಿ ಸ್ಥಾಪನೆಯಾಗದಿದ್ದರೆ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯ ನಿರ್ವಹಣೆ ಕಷ್ಟವಾಗುತ್ತದೆ. ಮಳೆ ಪ್ರಮಾಣದ ನಿಖರ ಮಾಹಿತಿ ಲಭ್ಯವಿಲ್ಲದಿದ್ದರೆ ರೈತರು ಬೆಳೆ ವಿಮೆ ಕಟ್ಟಲು ಹಿಂದೇಟು ಹಾಕುವ ಸಾಧ್ಯತೆಯೂ ಇದೆ ಎಂದು ಅವರು ಎಚ್ಚರಿಸಿದರು.

ಅಂಗನವಾಡಿ ಕಟ್ಟಡಗಳ ಸುರಕ್ಷತೆಗೆ ಆದ್ಯತೆ

ಶಿಥಿಲಗೊಂಡ ಹಾಗೂ ಸುರಕ್ಷಿತವಲ್ಲದ ಅಂಗನವಾಡಿ ಕಟ್ಟಡಗಳಿಗೆ ಮಕ್ಕಳನ್ನು ಕಳುಹಿಸಬಾರದು. ಇಂತಹ ಕಟ್ಟಡಗಳನ್ನು ಗುರುತಿಸಿ ಮರುನಿರ್ಮಾಣ ಅಥವಾ ತಕ್ಷಣದ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲೆಯ 997 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಸರಬರಾಜು ಮಾಡಲಾಗಿದ್ದು, ಅವುಗಳನ್ನು ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ನಗರ ವ್ಯಾಪ್ತಿಯ ಅಂಗನವಾಡಿಗಳಿಗೆ ಪಾತ್ರೆ, ಹೊದಿಕೆ ಹಾಗೂ ಇತರ ಮೂಲಭೂತ ಸೌಕರ್ಯ ಒದಗಿಸಲು ರೂ.25 ಲಕ್ಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಆ.14ರವರೆಗೆ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ

ರೈತರು ಬೆಳೆ ವಿಮೆ ಕಂತು ಪಾವತಿಸಲು ಆಗಸ್ಟ್ 14ರವರೆಗೆ ಅವಕಾಶವಿದೆ. ಕೋ-ಆಪರೇಟಿವ್ ಸೊಸೈಟಿಗಳು ಹಾಗೂ ಬ್ಯಾಂಕುಗಳು ರೈತರಿಂದ ಬೆಳೆ ವಿಮೆ ಕಂತು ಸ್ವೀಕರಿಸಲು ನಿರಾಕರಿಸಬಾರದು ಎಂದು ಸಚಿವರು ಸೂಚಿಸಿದರು.
ಈ ಕುರಿತು ಕೃಷಿ ಜಂಟಿ ನಿರ್ದೇಶಕರು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅರ್ಹ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನಗರಕ್ಕೆ ಹೊಸ ಶುದ್ಧೀಕರಣ ಘಟಕ

ಶಿವಮೊಗ್ಗ ನಗರಕ್ಕೆ ಹೊಸ ಶುದ್ಧೀಕರಣ ಘಟಕ ಆರಂಭಿಸುವ ಯೋಜನೆ ಸಿದ್ಧವಾಗಿದೆ. ಗಾಜನೂರು ಸಮೀಪ ಜಾಗ ಗುರುತಿಸಲಾಗಿದ್ದು, ಬಜೆಟ್‌ನಲ್ಲಿ ಅಗತ್ಯ ಹಣ ಮೀಸಲಿಟ್ಟು ಯೋಜನೆಗೆ ಮಂಜೂರಾತಿ ನೀಡಲು ಸಹಕರಿಸುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸಚಿವರಲ್ಲಿ ಮನವಿ ಮಾಡಿದರು.

ಬಿತ್ತನೆ ಬೀಜದ ದಾಸ್ತಾನು ವಿವರ

ಕೃಷಿ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 7,905.54 ಕ್ವಿಂಟಾಲ್ ಬಿತ್ತನೆ ಬೀಜದ ಅಗತ್ಯವಿದ್ದು, ಈವರೆಗೆ 5,125.36 ಕ್ವಿಂಟಾಲ್ ಬಿತ್ತನೆ ಬೀಜ ಸರಬರಾಜಾಗಿದೆ ಎಂದು ತಿಳಿಸಿದರು.
ಸರಬರಾಜಾದ ಬಿತ್ತನೆ ಬೀಜದಲ್ಲಿ 2,639.93 ಕ್ವಿಂಟಾಲ್ ವಿತರಿಸಲಾಗಿದ್ದು, 2,485.43 ಕ್ವಿಂಟಾಲ್ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು.

ರಸಗೊಬ್ಬರ ದಾಸ್ತಾನು ಸಾಕಷ್ಟು

ಜಿಲ್ಲೆಯಲ್ಲಿ ಒಟ್ಟು 88,060 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯತೆಯಿದ್ದು, ಇದರಲ್ಲಿ 57,701 ಮೆಟ್ರಿಕ್ ಟನ್ ಮಾರಾಟವಾಗಿದೆ. ಪ್ರಸ್ತುತ 34,898.8 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ರಸಗೊಬ್ಬರದ ಕೊರತೆ ಉಂಟಾಗದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರೈತರ ಹಿತರಕ್ಷಣೆ, ಕುಡಿಯುವ ನೀರಿಗೆ ಆದ್ಯತೆ

ಸಭೆಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ, ರೈತರ ಹಿತರಕ್ಷಣೆ, ಕುಡಿಯುವ ನೀರಿನ ಪೂರೈಕೆ, ಕೃಷಿ ಚಟುವಟಿಕೆಗಳು, ಮಳೆ ಹಾನಿ ಪರಿಹಾರ, ನೀರಾವರಿ ಯೋಜನೆಗಳು, ಅಂಗನವಾಡಿ ಮೂಲಸೌಕರ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಬರ ಪರಿಸ್ಥಿತಿಯಿಂದ ಜನಸಾಮಾನ್ಯರು ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಲಭ್ಯವಿರುವ ನೀರು, ಬೀಜ, ರಸಗೊಬ್ಬರ ಹಾಗೂ ಮೇವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಸಿಸಿಎಫ್ ಹನುಂತಪ್ಪ, ಡಿಸಿಎಫ್ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಎಸಿ, ತಹಶೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Imp meeting with District OfficialsKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ನಿಲ್ದಾಣದ ಯಾರ್ಡ್ ಮರುವಿನ್ಯಾಸ | ಏನೆಲ್ಲಾ ಅತ್ಯಾಧುನಿಕ ಬದಲಾವಣೆಯಾಗಿದೆ?

Next Post

ಶಿವಮೊಗ್ಗ | ಔಷಧ ಸಂಶೋಧನೆಗೆ ಎಐ ಹೊಸ ದಾರಿ: ಡಾ. ತಿಪ್ಪೇಸ್ವಾಮಿ

kalpa News

kalpa News

Next Post
Shivamogga: AI Playing a Key Role in Drug Research

ಶಿವಮೊಗ್ಗ | ಔಷಧ ಸಂಶೋಧನೆಗೆ ಎಐ ಹೊಸ ದಾರಿ: ಡಾ. ತಿಪ್ಪೇಸ್ವಾಮಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL