ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾದ್ಯಂತ ನಿನ್ನೆ ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, #Heavy Rain ಇಂದೂ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಪ್ರಮುಖ ಜಲಾಶಯಗಳಾದ ತುಂಗಾ, #Tunga ಭದ್ರಾ #Bhadra ಹಾಗೂ ಲಿಂಗನಮಕ್ಕಿ #Linganamakki ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಇದರ ಪರಿಣಾಮ ಲಿಂಗನಮಕ್ಕಿ ಆಣೆಕಟ್ಟೆಯ ಎಲ್ಲ ಕ್ರಸ್ಟ್ ಗೇಟುಗಳನ್ನೂ ತೆರೆದು 15 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಲಿಂಗನಮಕ್ಕಿ ಜಲಾಶಯದ ಭರ್ತಿಗೆ ಇನ್ನು ಕೇವಲ 4 ಅಡಿ ಮಾತ್ರ ಬಾಕಿಯಿದೆ. ಇಂದು ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ನೀರಿನ ಮಟ್ಟ 1816.20 (ಗರಿಷ್ಠ ಮಟ್ಟ : 1819) ಅಡಿಗೆ ತಲುಪಿದೆ. ನೀರಿನ ಒಳಹರಿವು 48393 ಕ್ಯೂಸೆಕ್ ಇದ್ದು, 4520 ಕ್ಯೂಸೆಕ್ ಹೊರ ಹರಿವಿದೆ. ಗಾಜನೂರಿನ ತುಂಗಾ ಜಲಾಶಯದ ಒಳಹರಿವು 75796 ಕ್ಯೂಸೆಕ್ ಇದ್ದು, 76757 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಭದ್ರಾ ಡ್ಯಾಂ ಒಳಹರಿವು 34,742 ಕ್ಯೂಸೆಕ್ ಇದ್ದು ಡ್ಯಾಂನ ನೀರಿನ ಮಟ್ಟವನ್ನು 184. 6 ಅಡಿಗೆ ಕಾಯ್ದುಕೊಳ್ಳಲಾಗಿದೆ. 38342 ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ನಿಬರ್ಂಧಿಸಲಾಗಿದೆ.
ನದಿ ಪಾತ್ರದ ಕವಲುಗುಂದಿ ಏರಿಯಾದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ತಿರುವಳ್ಳುವರ್ ಸಮುದಾಯ ಭವನದಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆದು, ನಿವಾಸಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post