No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯವನ್ನು ಕೊರೋನಾ ಮುಕ್ತಗೊಳಿಸಲು ಲಸಿಕೆ ಅಭಿಯಾನ ಯಶಸ್ವಿಗೊಳಿಸಿ: ಸಚಿವ ಈಶ್ವರಪ್ಪ ಕರೆ

ಲಸಿಕೆ ಮೂಲಕ ಕೋವಿಡ್ ನಿಯಂತ್ರಿಸಲು “ಮಾರ್ಗದರ್ಶಿಕೆ” ಅನಾವರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 25, 2021
in ಶಿವಮೊಗ್ಗ
0
ರಾಜ್ಯವನ್ನು ಕೊರೋನಾ ಮುಕ್ತಗೊಳಿಸಲು ಲಸಿಕೆ ಅಭಿಯಾನ ಯಶಸ್ವಿಗೊಳಿಸಿ: ಸಚಿವ ಈಶ್ವರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹರಿಗೂ ದೊರಕಿಸುವ ‘ಲಸಿಕಾ ಅಭಿಯಾನ’ ವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೋನಾ ಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫರೆನ್ಸ್ ಸಭಾಂಣದಲ್ಲಿ ಇಂದು ಸಚಿವರು ಧ್ವನಿ ಫೌಂಡೇಶನ್, ಬೆಂಗಳೂರು, ಜಿಲ್ಲಾ ಪಂಚಾಯತ್ ಹಾಗೂ ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯ ಕೋವಿಡ್ ಜಿಲ್ಲಾ ನೋಡಲ್ ಏಜೆನ್ಸಿ ಇವರ ಸಹಯೋಗದಲ್ಲಿ ಕೋವಿಡ್ ಲಸಿಕೆ ಮಹತ್ವ ಮತ್ತು ಅದರ ಉಪಯೋಗ ಕುರಿತು ಎಲ್ಲರಿಗೂ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ತಯಾರಿಸಲಾಗಿರುವ ‘ಲಸಿಕೆ ಮೂಲಕ ಕೋವಿಡ್ 19 ನ್ನು ನಿಯಂತ್ರಿಸಲು ‘ಮಾರ್ಗದರ್ಶಿಕೆ’ ಯನ್ನು ಅನಾವರಣಗೊಳಿಸಿ ಮಾತನಾಡಿದರು.

ರಾಜ್ಯ ತುಂಬಾ ವ್ಯವಸ್ಥಿತವಾಗಿ ಎಲ್ಲರಿಗೂ ಲಸಿಕೆ ದೊರಕಿಸುವ ಅಭಿಯಾನವನ್ನು ಈಗಾಗಲೇ ಪ್ರಾರಂಭಿಸಿದೆ. ಜೂನ್ 21 ರಂದು ಸುಮಾರು 11 ಲಕ್ಷ ಜನರಿಗೆ ಒಂದೇ ದಿನ ಲಸಿಕೆ ಹಾಕುವ ಮೂಲಕ ದೊಡ್ಡ ಸಾಧನೆಯನ್ನೇ ಮಾಡಲಾಗಿದೆ. ಹೀಗೇ ಇಡೀ ರಾಜ್ಯದ ಜನತೆಗೆ ಲಸಿಕೆ ದೊರಕಬೇಕು ಹಾಗೂ ರಾಜ್ಯ ಕೊರೊನಾ ಮುಕ್ತವಾಗಬೇಕು ಎಂಬ ಸದುದ್ದೇಶದಿಂದ ಮಾರ್ಗದರ್ಶಿಕೆಯನ್ನು ಇಂದು ಲೋಕಾರ್ಪಣೆ ಮಾಡಿದ್ದೇನೆ. ಎಲ್ಲ ಜಿಲ್ಲೆಗಳಲ್ಲಿ ಈ ಮಾರ್ಗದರ್ಶಿಕೆಯನ್ನು ಗ್ರಾ.ಪಂ ಮೂಲಕ ಜನರಿಗೆ ತಲುಪಿಸಬೇಕು ಎಂದರು.

ಆರಂಭದಲ್ಲಿ ಲಸಿಕೆ ಬಗ್ಗೆ ಹಲವರಲ್ಲಿ ತಪ್ಪು ಕಲ್ಪನೆ ಇತ್ತು. ಈಗಲೂ ಕೆಲವರಲ್ಲಿ ಇದೆ. ಅದನ್ನು ಹೋಗಲಾಡಿಸುವ ಪ್ರಯತ್ನ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಮಾಡುತ್ತಿದೆ. ಜೊತೆಗೆ ಇತ್ತೀಚೆಗೆ ಲಸಿಕೆ ಬಗ್ಗೆ ಜಾಗೃತಿ ಕೂಡ ಹೆಚ್ಚಾಗಿದೆ. ಲಸಿಕೆ ಬೇಡಿಕೆ ಹೆಚ್ಚಿದೆ. ನಮ್ಮ ಪ್ರಧಾನಿಯವರು ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ಪಣ ತೊಟ್ಟಿದ್ದಾರೆ. ಲಸಿಕೆಯನ್ನೂ ಪೂರೈಸುತ್ತಿದ್ದಾರೆ.

ಕೊರೋನಾ ನಿಯಂತ್ರಣ ಕುರಿತು ಜನಜಾಗೃತಿ ಮತ್ತು ಎರಡನೇ ಅಲೆ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರ, ವಿವಿಧ ಇಲಾಖೆಗಳು ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಗ್ರಾಮೀಣಾಭಿವೃದ್ದಿ ಇಲಾಖೆಯ ಸೇವೆಯನ್ನು ಮರೆಯುವಂತಿಲ್ಲ. ರಾಜ್ಯ, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿಗಳು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಎನ್‍ಜಿಓಗಳು ಜನಜಾಗೃತಿಗೊಳಿಸುವಲ್ಲಿ ಮಾಡುತ್ತಿರುವ ಕೆಲಸ ಅತ್ಯುತ್ತಮವಾಗಿದೆ ಎಂದು ಶ್ಲಾಘಿಸಿದರು.

ಗ್ರಾಮ ಮಟ್ಟದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಅಭಿಯಾನದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಮಾರ್ಗದರ್ಶಿಯನ್ನು ಹೊರತಂದಿದ್ದು, ಇದರಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾ.ಪಂ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಪಾತ್ರವನ್ನು ವಿವರಿಸಲಾಗಿದೆ.

ಈ ಮಾರ್ಗದರ್ಶಿಕೆಯಿಂದಾಗಿ ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರೆಗೆ ಎಲ್ಲರಿಗೂ ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಸಿಗುತ್ತದೆ. ಈ ಮಾರ್ಗದರ್ಶಿಕೆಯನ್ನು ಉಪಯೋಗಿಸಿಕೊಂಡು ಎಲ್ಲಾ ಮಟ್ಟದಲ್ಲಿಯೂ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಇನ್ನೂ ಹೆಚ್ಚು ವ್ಯವಸ್ಥಿತವಾಗಿ ಕೆಲಸ ಮಾಡಿ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಿ ಕೊರೊನಾದಿಂದ ರಾಜ್ಯ ಮುಕ್ತಿ ಪಡೆಯಲು ಸಹಾಯವಾಗಲಿದೆ ಎಂದು ಆಶಿಸುತ್ತೇನೆ ಎಂದರು.

ಈ ಮಾರ್ಗದರ್ಶಿ ತಯಾರಿಸಲು ಸಹಾಯ ಮಾಡಿದ ಧ್ವನಿ ಫೌಂಡೇಶನ್‍ಗೆ ಹಾಗೂ ಇವರೊಂದಿಗೆ ಕೈಜೋಡಿಸಿರುವ ಶಿವಮೊಗ್ಗ ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ ಅಭಿನಂದಿಸುತ್ತೇನೆ. ಇವು ಈಗಾಗಲೇ ಜಿಲ್ಲೆಯ ಎಲ್ಲಾ ಜೆಸಿಐ ಸಂಸ್ಥೆ ಹಾಗೂ ಇನ್ನಿತರೆ ಸಂಘ ಸಂಸ್ಥೆಗಳನ್ನು, ಎಲ್ಲಾ ಆಶಾ ಕಾರ್ಯಕರ್ತೆಯರು, ಪಿಡಿಓಗಳನ್ನು ಮಾರ್ಗದರ್ಶಿಯ ಪ್ರಕಾರ ಒಗ್ಗೂಡಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಪೂರ್ವಸಿದ್ದತೆ ಮಾಡಿಕೊಂಡು ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ. ನಾವೆಲ್ಲರೂ ಒಗ್ಗಟ್ಟಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಮುಕ್ತ ರಾಜ್ಯವಾಗಿಸೋಣ ಎಂದು ಕರೆ ನೀಡಿದರು.

ಉಚಿತ ಲಿಸಿಕೆ ಮತ್ತು ಪಡಿತರ :
ನಮ್ಮ ಪ್ರಧಾನಿಯವರು ದೇಶದ ಎಲ್ಲ ಅರ್ಹರಿಗೆ ಉಚಿತ ಲಸಿಕೆ ನೀಡುವ ಪಣ ತೊಟ್ಟಿದ್ದಾರೆ. ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಸುಮಾರು 80 ಕೋಟಿ ಜನರಿಗೆ ನವೆಂಬರ್ ಮಾಹೆವರೆಗೆ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಣೆ ಮಾಡುವ ಘೋಷಣೆ ಮಾಡಿದ್ದು, ಸರ್ಕಾರ ನಮ್ಮ ಜೊತೆ ಇದೆ ಅನ್ನುವ ಭಾವ ಜನರಲ್ಲಿ ಮೂಡಿದೆ.

2ನೇ ಅಲೆ ಯಶಸ್ವಿಯಾಗಿ ಎದುರಿಸಿದ್ದೇವೆ. ವಿಶ್ವದಲ್ಲೇ ನಮ್ಮ ದೇಶ ಎರಡನೇ ಅಲೆಯನ್ನು ಪರಿಣಾಮಕಾರಿ ಎದುರಿಸಲು ಪಣತೊಟ್ಟು ಯಶಸ್ವಿಯಾಗಿದೆ. ಅದೇ ರೀತಿಯಲ್ಲಿ ನಮ್ಮ ರಾಜ್ಯ ಕೂಡ ಎಲ್ಲರ ಸಹಕಾರದೊಂದಿಗೆ ಎರಡನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಿದೆ ಎಂದರು.

ಕಾರ್ಯಕ್ರಮ ಆರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವಾಗತಿಸಿದರು. ಧ್ವನಿ ಫೌಂಡೇಶನ್ ಕಾರ್ಯನಿರ್ವಾಹಕ ನಿರ್ದೇಶಕ ಗೋಪಿನಾಥ್ ಮಾರ್ಗದರ್ಶಿಕೆ ಕುರಿತಾದ ಪರಿಚಯಾತ್ಮಕ ಅಂಶಗಳ ಬಗ್ಗೆ ವಿವರಣೆ ನೀಡಿದರು. ಆರ್‍ಡಿಪಿಆರ್ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಕರ್ನಾಟಕ ಗ್ರಾಮ ಪಂಚಾಯಿತಿಗಳಲ್ಲಿ ಲಸಿಕೆ ಹಕುವ ಕುರಿತು ಮಾಹಿತಿ ನೀಡಿದರು.

ಇದೇ ವೇಳೆ ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಜಿಲ್ಲಾ ಪಂಚಾಯತ್ ಸಿಇಓ ಎಂ.ಎಲ್.ವೈಶಾಲಿ, ಡಿಎಸ್ ಜಯಲಕ್ಷ್ಮಿ, ಡಿಹೆಚ್‍ಓ ಡಾ. ರಾಜೇಶ್ ಸುರಗಿಹಳ್ಳಿ, ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯ ಸಿಇಓ ಬದ್ರೀಶ.ಬಿ.ಟಿ, ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaCovid VaccineKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಕೊರೋನಾಕೋವಿಡ್ ಲಸಿಕೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share202Tweet123Send
Previous Post

ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ- ಯಾವುದಕ್ಕೆ ಅವಕಾಶ, ಏನಕ್ಕೆ ನಿರ್ಬಂಧ: ಇಲ್ಲಿದೆ ಮಾಹಿತಿ

Next Post

ಕೊರೋನಾ ನಿಯಂತ್ರಿಸಲು ಜಾಗೃತಿ ಅತಿ ಅವಶ್ಯ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾ ನಿಯಂತ್ರಿಸಲು ಜಾಗೃತಿ ಅತಿ ಅವಶ್ಯ: ಸಚಿವ ಈಶ್ವರಪ್ಪ

ಕೊರೋನಾ ನಿಯಂತ್ರಿಸಲು ಜಾಗೃತಿ ಅತಿ ಅವಶ್ಯ: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL