ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸಹಕಾರಿಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಪಿಇಎಸ್ ಟ್ರಸ್ಟ್‌ನ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಪಿಇಎಸ್‌ಐಟಿಎಮ್ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಪೇರಣಾ ಸೈನ್ಸ್ ಎಕ್ಸ್ಪೋ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅಥಿತಿ ಡಿಡಿಪಿಯು ಕೃಷ್ಣಪ್ಪ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಪ್ರಾಮುಖ್ಯತೆ ವಹಿಸುತ್ತದೆ. ಮತ್ತು ವಿದ್ಯಾರ್ಥಿಗಳಿಗೆ ಭವಿಷದಲ್ಲಿ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಚ್ಯೆತನ್ಯ ಕುಮಾರ್, ಪಿಇಎಸ್ ಪಿಯುಸಿ ಪ್ರಾಂಶುಪಾಲ ಎ. ನಾಗರಾಜ ಬಾಬು, ಹೊಳೆಹೊನ್ನರು ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಜಯಂತ್, ಹೆಚ್. ಆರ್ ಶಂಕರ ನಾರಾಯಣ ಶಾಸ್ತ್ರೀ, ಸರ್ವೋದಯ ಪಿಯು ಕಾಲೇಜ್ ಪ್ರಾಂಶುಪಾಲ ರವಿಶಂಕರ ಇತರರು ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಪಿಯು ಕಾಲೇಜಿನ 30 ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post