ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳ ಪಾಲಿಗೆ ವರದಾನ ಎಂದು ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕುಮಾರ್ ಹೇಳಿದರು.
Also Read>> ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ
ಅವರು ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ವತಿಯಿಂದ ರಂಗಾಯಣ ಡ್ರಾಮಾ ಥೇಟರ್‌ನಲ್ಲಿ #DramaTheater ಆಯೋಜಿಸಿದ್ದ ವಿದ್ಯಾರ್ಥಿ ವೇತನ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಬಿ.ಎಸ್.ಎಸ್. ಕಿರುಬಂಡವಾಳ ಸಂಸ್ಥೆಯು ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಬೇಕು. ಸಮಾಜಕ್ಕೆ ಮಾದರಿಯಾಗಿರಬೇಕು ಎಂದರು.
ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಹೆಲ್ಮೇಟ್ #Helmet ಧರಿಸದೇ ವಾಹನ ಚಲಾಯಿಸಬಾರದು ಎಂದರು.
Also Read>> ಸುನೀತಾ ವಿಲಿಯಮ್ಸ್ ಮರಳಿ ಭೂಮಿಗೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ
ಲೀಡ್ ಬ್ಯಾಂಕ್ ಮುಖ್ಯಸ್ಥ ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಉಳಿತಾಯ ಖಾತೆಯನ್ನು ತೆರೆಯುವುದರ ಮೂಲಕ ಹಣ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ವೇತನವು ವಿದ್ಯಾರ್ಥಿಯ ಶೈಕ್ಷಣಿಕ ಉನ್ನತಿಗೆ ಕಾರಣವಾಗುತ್ತದೆ ಎಂದರು.
ಮುಖ್ಯಸ್ಥರಾದ ರಘು ಎನ್.ಸಿ. ಮಾತನಾಡಿ, ಬಿ.ಎಸ್.ಎಸ್. ಸಂಸ್ಥೆಯು ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚು ಕೆಲಸ ಮಾಡುತ್ತಿದೆ. ಮುಖ್ಯವಾಗಿ ಮಹಿಳೆಯರಿಗೆ ಅದರಲ್ಲೂ ಗ್ರಾಮೀಣ ಮಹಿಳೆಯರ ಸ್ವಾವಲಂಬಿಗೆ ಹೆಚ್ಚು ಶ್ರಮಿಸುತ್ತದೆ ಎಂದರು.
ಕೆನರಾ ಬ್ಯಾಂಕ್ ಮುಖ್ಯಸ್ಥ ಬಿ.ಆರ್.ಶಂಕರಪ್ಪ ಮಾತನಾಡಿ, ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ಬಡತನ ನಿರ್ಮೂಲನೆಗೆ ಆದ್ಯತೆ ಕೊಡುತ್ತಿದೆ. ಆರೋಗ್ಯ, ಶಿಕ್ಷಣ, ಹೈನುಗಾರಿಕೆಯ ಅಂಶಗಳನ್ನು ಇಟ್ಟುಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವಲ್ಲದೇ ಇತರ ರಾಜ್ಯಗಳ ಶಾಲೆಗಳ ಅಭಿವೃದ್ಧಿಗೂ ಕೂಡ ಸಹಾಯ ಮಾಡುತ್ತಿದೆ. ರಾಜ್ಯದ 15 ಜಿಲ್ಲೆಗಳಲ್ಲಿ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ. ಶಿವಮೊಗ್ಗದಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಪಂಡಿತ್ ಗಂಗಾಧರ್ ಪಾಟೀಲ್, ಪ್ರಶಾಂತ್‌ಕುಮಾರ್, ಎಸ್. ಶಿವಲಿಂಗ ಶೆಟ್ಟಿ, ಎನ್.ಎಲ್. ಜಗದೀಶ್, ಎಂ.ಪಿ. ಗುರುಪ್ರಸಾದ್, ಎಂ. ಶಶಿಕುಮಾರ್, ಜೆ.ಎಸ್. ಗಿರೀಧರ್ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post